ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಯಂ ಶಿಕ್ಷಕರಿಗೆ ಮಾತ್ರ ವೋಟಿನ ಹಕ್ಕು

Published 3 ಮೇ 2024, 13:49 IST
Last Updated 3 ಮೇ 2024, 13:49 IST
ಅಕ್ಷರ ಗಾತ್ರ

ತುಮಕೂರು: ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮೇ 6ರ ವರೆಗೆ ಕಾಲಾವಕಾಶ ನೀಡಿದ್ದು, ಕಾಯಂ ಶಿಕ್ಷಕರು ಮಾತ್ರ ನೋಂದಣಿ ಮಾಡಿಸಬಹುದಾಗಿದೆ.

ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಹೊಸದಾಗಿ ಹೆಸರು ಸೇರಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. 2023ರ ನವೆಂಬರ್ 1ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷಗಳ ಕಾಲ ಪ್ರೌಢಶಾಲೆ ಶಿಕ್ಷಕರಾಗಿ ಕೆಲಸ ನಿರ್ವಹಿಸಿರಬೇಕು. ರಾಜ್ಯದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನೆ ಮಾಡಿರಬೇಕು. ಕಾಯಂ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರೆಕಾಲಿಕ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಮೇ 6ರಂದು ಸಂಜೆ 5.30 ಗಂಟೆ ಒಳಗಾಗಿ ನಿಗದಿತ ನಮೂನೆ-19ನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕುಗಳ ನಿಯೋಜಿತ ಅಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗೆ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಜಾರಿಯಲ್ಲಿರುವ ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳು ಪರಿಷತ್ತು ಚುನಾವಣೆಗೂ ಅನ್ವಯವಾಗುತ್ತವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT