ಬುಧವಾರ, ಮೇ 12, 2021
24 °C

ಕಾಳಿಕಾಂಭ ಕ್ಷೇತ್ರದಲ್ಲಿ ವಿಶೇಷ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ತಾಲ್ಲೂಕಿನ ದೀಪಾಂಬುದಿ ಕಾಳಿಕಾಂಭ ಕ್ಷೇತ್ರದಲ್ಲಿ ಪ್ರತಿ ಅಮಾವಾಸ್ಯೆಯಲ್ಲಿ ನಿರಂತರ ಧಾರ್ಮಿಕ ಕಾರ್ಯಗಳನ್ನು ನಡೆಸಲು ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಸಮಿತಿಯ ಕೆ.ಬಿ. ಕುಮಾರಾಚಾರ್ಯ ತಿಳಿಸಿದ್ದಾರೆ.

ದೀಪಾಂಬುದಿ ಕಾಳಿಕಾಂಭ ಕ್ಷೇತ್ರದಲ್ಲಿ ಯುಗಾದಿ ಅಮಾವಾಸ್ಯೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಪೂಜಾ ಮಹೋತ್ಸವದಲ್ಲಿ ಮಾತನಾಡಿದರು.

ಪುಣ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಗಳು ಭಕ್ತರ ಸಹಕಾರ, ಗುರು ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಶಾಂತಿ, ನೆಮ್ಮದಿ ದೊರೆಯುತ್ತವೆ ಎಂದರು.

ಸಮಿತಿಯ ಪದಾಧಿಕಾರಿಗಳಾದ ದಿನಮಣಿ, ರಮೇಶ್, ಬಸವರಾಜು, ಶಂಕರಾಚಾರ್, ಪ್ರಕಾಶ್, ಶೇಖರ್, ಬಿಜೆಪಿ ಮುಖಂಡ ರಾಜೇಶ್ ಗೌಡ, ಪುರಸಭೆ ಸದಸ್ಯ ಮಲ್ಲಿಪಾಳ್ಯ ಶ್ರೀನಿವಾಸ್, ಲಯನ್ಸ್ ಕ್ಲಬ್ ಅಧ್ಯಕ್ಷ ದಿನೇಶ್ ಕುಮಾರ್, ನಿರಂಜನಾಚಾರ್ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು