ಕೊರಟಗೆರೆ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿದವು. ಕೋವಿಡ್‌ನಿಂದ ಕಳೆಗುಂದಿದ್ದ ರಾಮ ನವಮಿ ಆಚರಣೆಯು ಈ ವರ್ಷ ಕಳೆಗಟ್ಟಿತ್ತು.
ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಇತರೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳ
ಲಾಗಿತ್ತು.
ಪಟ್ಟಣದ ಗಂಗಾಧರೇಶ್ವರ ದೇವಸ್ಥಾನ, ಕಣ್ಣಪ್ಪ ದೇವಸ್ಥಾನ, ಶನೈಶ್ವರ ದೇವಾಲಯ, ಬೈಲಾಂಜನೇಸ್ವಾಮಿ ದೇಗುಲ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಹಮ್ಮಿಕೊಳ್ಳಲಾಗಿತ್ತು.
ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಲ್ಲಾ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗಿನಿಂದಲೇ ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು.
ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಹಬ್ಬದ ಅಂಗವಾಗಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ಭಕ್ತರಿಗಾಗಿ ದೇವಾಲಯದಲ್ಲಿ ಪಾನಕ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕಿನ ಬಹುತೇಕ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಕೆಲವು ದೇವಾಲಯಗಳಲ್ಲಿ ಯುವಕರು ಸಮವಸ್ತ್ರ ಧರಿಸಿ ಪಾನಕ, ಮಜ್ಜಿಗೆ, ಪ್ರಸಾದ ಹಂಚುವಲ್ಲಿ ನಿರತರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.