ಗುಬ್ಬಿ: ಶ್ರಾವಣ ಮಾಸದ ಕಡೆ ಶನಿವಾರದ ಅಂಗವಾಗಿ ತಾಲ್ಲೂಕಿನ ಶನಿಮಹಾತ್ಮ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ದೇವಾಲಯದಲ್ಲಿ ಅಭಿಷೇಕ ಹಾಗೂ ಅರ್ಚನೆಗಳನ್ನು ಏರ್ಪಡಿಸಲಾಗಿತ್ತು. ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀತಿ ಎಳ್ಳುಬತ್ತಿ ಸೇವೆ ನಂತರ ಪೂಜೆ ಸಲ್ಲಿಸಿದರು.
ದೇವಾಲಯಕ್ಕೆ ಭೇಟಿ ನೀಡಿದ ಭಕ್ತರಿಗೆ ತೀರ್ಥ, ಪ್ರಸಾದದ ಜೊತೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದವು.