ತುಮಕೂರು: ‘ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಭಾವನೆ ಇದೆ. ಆದರೆ ನಾನು ನಿತ್ಯ ಒಂದು ತಾಸಿಗೂ ಹೆಚ್ಚು ಸಮಯ ಪತ್ರಿಕೆಗಳನ್ನು ಓದುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬಹಳ ಅಪಾಯಕಾರಿ. ಪತ್ರಕರ್ತರು ಸತ್ಯ, ನೈಜ ವರದಿಗೆ ಆದ್ಯತೆ ನೀಡಬೇಕು. ಆದರೆ, ಈಚೆಗೆ ಪತ್ರಿಕೋದ್ಯಮದ ಆದ್ಯತೆಗಳು ಸಹ ಬದಲಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರದ ಆಡಳಿತ ವೈಖರಿ ಟೀಕೆ ಮಾಡಿದರೆ ತಕಾರರು ಇಲ್ಲ. ಟೀಕೆ ಆರೋಗ್ಯಕರವಾಗಿ, ಸಮಾಜಮುಖಿಯಾಗಿ, ಜನಪರವಾಗಿರಬೇಕು. ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಬೆಳೆಯುತ್ತಿರುವ ವೇಗದಲ್ಲೇ ಪತ್ರಿಕೋದ್ಯಮ ಕೂಡ ಬೆಳೆಯುತ್ತಿದೆ. ಇದರಿಂದ ಮಾಧ್ಯಮ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ. ಇದು ಅವಕಾಶ, ಸವಾಲೂ ಎರಡೂ ಆಗಿದೆ ಎಂದರು.

ಗೃಹ ಸಚಿವ ಜಿ.ಪರಮೇಶ್ವರ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆ.ಎನ್. ರಾಜಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.