ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ಗೈರಾದರೆ ಶಿಸ್ತು ಕ್ರಮ

Last Updated 13 ಜುಲೈ 2020, 18:09 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 12 ಕೇಂದ್ರಗಳಲ್ಲಿ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ ಸಕಾರಣವಿಲ್ಲದೆ ಗೈರು ಹಾಜರಾದ 55 ವರ್ಷದೊಳಗಿನ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಡಿಪಿಐಗಳಾದ ಎಂ.ಆರ್.ಕಾಮಾಕ್ಷಿ ಹಾಗೂ ಎಂ.ರೇವಣಸಿದ್ಧಪ್ಪ ತಿಳಿಸಿದ್ದಾರೆ.

ತುಮಕೂರಿನ ಆರ್ಯನ್ ಪ್ರೌಢಶಾಲೆ, ಎಂಪ್ರೆಸ್ ಪ್ರೌಢಶಾಲೆ, ಸೆಂಟ್ ಮೆರೀಸ್ ಪ್ರೌಢಶಾಲೆ, ಸಿದ್ಧಗಂಗಾ ಪ್ರೌಢಶಾಲೆ, ರೇಣುಕಾ ವಿದ್ಯಾಪೀಠ, ಸೋಮೇಶ್ವರ ಬಾಲಕಿಯರ ಪ್ರೌಢಶಾಲೆ ಹಾಗೂ ಮಧುಗಿರಿಯ ಕಾರ್ಡಿಯಲ್ ಆಂಗ್ಲ ಮಾಧ್ಯಮ ಶಾಲೆ, ಚಿರಕ್ ಪಬ್ಲಿಕ್ ಶಾಲೆ, ಚೇತನ ಪ್ರೌಢಶಾಲೆ, ಕೆ.ಆರ್.ಬಡಾವಣೆ ಸರ್ಕಾರಿ ಪ್ರೌಢಶಾಲೆ, ಎಂಜಿಎಂ ಪ್ರೌಢಶಾಲೆ, ಜೂಪಿಟರ್ ಪ್ರೌಢಶಾಲೆಗಳಲ್ಲಿ ಮೌಲ್ಯಮಾಪನ ನಡೆಯಿತು.

ಮೌಲ್ಯಮಾಪನ ಕೇಂದ್ರಕ್ಕೆ ಹಾಜರಾಗಲು ಅನುವಾಗುವಂತೆ ಇಲಾಖೆಯಿಂದ ಶಿಕ್ಷಕರಿಗಾಗಿ ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕಿನಿಂದ ತಲಾ 8, ಕುಣಿಗಲ್ ತಾಲ್ಲೂಕಿನಿಂದ 5, ಚಿಕ್ಕನಾಯಕನಹಳ್ಳಿ ಹಾಗೂ ಕೊರಟಗೆರೆಯಿಂದ ತಲಾ 3, ಪಾವಗಡ ಹಾಗೂ ಶಿರಾ ತಾಲ್ಲೂಕಿನಿಂದ ತಲಾ 10 ಖಾಸಗಿ ಶಾಲೆಗಳ ಬಸ್ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಮೌಲ್ಯಮಾಪನ ಕೇಂದ್ರದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಒಬ್ಬ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಶುಶ್ರೂಷಕಿಯನ್ನು ನಿಯೋಜಿಸಲಾಗಿದೆ. ಅಂತರ ಕಾಯ್ದುಕೊಳ್ಳುವ, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ವ್ಯವಸ್ಥೆಯನ್ನು ಕೇಂದ್ರಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT