ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಸೆ. 21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ
Last Updated 17 ಸೆಪ್ಟೆಂಬರ್ 2020, 5:47 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 14 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 7 ಕೇಂದ್ರಗಳಲ್ಲಿ ಸೆ. 21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು.

ಪೂರಕ ಪರೀಕ್ಷೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸೆ.28ರವರೆಗೆ ಪರೀಕ್ಷೆ ನಡೆಯಲಿವೆ. ಕೋವಿಡ್-19 ಸೋಂಕು ಹರಡುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇಂದ್ರಗಳಲ್ಲಿ ಮುಂಜಾಗ್ರತೆ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ಡಿಡಿಪಿಗಳಾದ ನಂಜಯ್ಯ, ರೇವಣ್ಣ ಸಿದ್ಧಪ್ಪ, ಜಿಲ್ಲಾ ಖಜಾನಾಧಿಕಾರಿ ಪದ್ಮಾವತಿ, ಬಿಇಒಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT