ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಸಿಇಒ ಎಚ್ಚರಿಕೆ

Published 30 ಜೂನ್ 2024, 6:05 IST
Last Updated 30 ಜೂನ್ 2024, 6:05 IST
ಅಕ್ಷರ ಗಾತ್ರ

ತುಮಕೂರು: ಈ ಬಾರಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿದಿರುವುದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಸಮಾಧಾನ ವ್ಯಕ್ತಪಡಿಸಿದ್ದು, ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿ.ಪಂನಲ್ಲಿ ಶನಿವಾರ ನಡೆದ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಶೇ 68.60, ಅನುದಾನಿತ ಶಾಲೆಗಳಲ್ಲಿ ಶೇ 40ರಷ್ಟು ಫಲಿತಾಂಶ ಬಂದಿದೆ. ಅನುದಾನಿತ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿಂದೆ ಉಳಿಯುತ್ತಿರುವುದು ಇದರಿಂದ ಸ್ಪಷ್ಟವಾಗಿ ಕಾಣುತ್ತಿದೆ. ಅನುದಾನಿತ ಶಾಲೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಇಲಾಖೆಗೆ ಶಿಕ್ಷಕರು ಗೌರವ ತರಬೇಕು. ಮಕ್ಕಳಿಗೆ ಕೇವಲ ಪಠ್ಯ ಪುಸ್ತಕಗಳಲ್ಲಿರುವ ವಿಷಯ ಬೋಧಿಸಿ ಉತ್ತೀರ್ಣರಾಗುವಂತೆ ಮಾಡುವುದರ ಜತೆಗೆ ಅನುಭವಾತ್ಮಕ ಕಲಿಕೆಯ ಮೂಲಕ ಮುಂದಿನ ಭವಿಷ್ಯಕ್ಕೆ ಬೇಕಾದ ಅಂಶಗಳನ್ನೂ ಕಲಿಸುವ ಅವಶ್ಯಕತೆ ಇದೆ ಎಂದು ಸಲಹೆ ಮಾಡಿದರು.

ಸರ್ಕಾರಿ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಸಮೀಕ್ಷೆ ನಡೆಸಿ ಮಾಹಿತಿ ಕಲೆ ಹಾಕಲಾಗಿದೆ. ಶೌಚಾಲಯ, ಸುಸಜ್ಜಿತ ಕೊಠಡಿ, ಆವರಣ ಗೋಡೆ, ವ್ಯವಸ್ಥಿತ ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ಡೆಸ್ಕ್ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಜಿ.ಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ತುಮಕೂರು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಪ್ರಭಾರ) ಕೆ.ಮಂಜುನಾಥ್, ಮಧುಗಿರಿ ವಿಭಾಗದ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆ ಪ್ರಮುಖರು ಉಪಸ್ಥಿತರಿದ್ದರು.

ತುಮಕೂರಿನಲ್ಲಿ ಶನಿವಾರ ನಡೆದ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು
ತುಮಕೂರಿನಲ್ಲಿ ಶನಿವಾರ ನಡೆದ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT