ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

SSLC Results: 30ನೇ ಸ್ಥಾನಕ್ಕೆ ಕುಸಿದ ಮಧುಗಿರಿ

Published 10 ಮೇ 2024, 4:51 IST
Last Updated 10 ಮೇ 2024, 4:51 IST
ಅಕ್ಷರ ಗಾತ್ರ

ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 62.44ರಷ್ಟು ಫಲಿತಾಂಶ ಪಡೆದು 30ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಕಳೆದ ವರ್ಷ ಮಧುಗಿರಿ ಶೈಕ್ಷಣಿಕ ಜಿಲ್ಲೆ ಶೇ 94.15ರಷ್ಟು ಫಲಿತಾಂಶ ಪಡೆಯುವ ಮೂಲಕ 9ನೇ ಸ್ಥಾನ ಪಡೆದಿತ್ತು. ಆದರೆ ಈ ವರ್ಷ ಶೇ 62.44 ರಷ್ಟು ಫಲಿತಾಂಶ ಪಡೆದು 30ನೇ ಸ್ಥಾನ ಪಡೆಯುವ ಮೂಲಕ 21ಗಳು ಸ್ಥಾನಗಳು ಕುಸಿದಿದೆ.

ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 12,715 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 7,993 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇ ನೂರರಷ್ಟು ಫಲಿತಾಂಶ ಪಡೆದ ಶಾಲೆಗಳ ವಿವಿರ: ಶಿರಾ ತಾಲ್ಲೂಕಿನ ಭುವನಹಳ್ಳಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮೊರಾರ್ಜಿ ವಸತಿ ಶಾಲೆ, ಗೌಡಗರೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಬರಗೂರು ಗಂಗಾ ಜ್ಯೋತಿ ಪ್ರೌಢಶಾಲೆ, ಪಟ್ಟನಾಯಕನಹಳ್ಳಿ ಶಾಂತಿನಿಕೇತನ ಪ್ರೌಢಶಾಲೆ, ಹುಯಿಲ್ ದೊರೆ ಶಾರಾದ ಇಂಟರ್‌ನ್ಯಾಷನಲ್‌ ಸ್ಕೂಲ್, ಶಿರಾದ ವಾಸವಿ ಇಂಗ್ಲಿಷ್ ಶಾಲೆ, ಮಧುಗಿರಿ ತಾಲ್ಲೂಕಿನ ಗುಂಡಗಲ್ಲು ಗ್ರಾಮದ ಸರ್ಕಾರಿ ಪ್ರೌಢಶಾಲೆ, ಶಿವನಗೆರೆ ಸರ್ಕಾರಿ ಪ್ರೌಢಶಾಲೆ, ಬಡವನಹಳ್ಳಿ ಮೊರಾರ್ಜಿ ವಸತಿ ಶಾಲೆ, ಕುಪ್ಪಾಚಾರಿ ಮೊರಾರ್ಜಿ ವಸತಿ ಶಾಲೆ, ಚಿರೆಕ್ ಪಬ್ಲಿಕ್ ಶಾಲೆ, ಬಡವನಹಳ್ಳಿ ಶ್ರೀರಂಗ ಪ್ರೌಢಶಾಲೆ, ಪಾವಗಡ ತಾಲ್ಲೂಕಿನ ಕೊಡಿಗೇಹಳ್ಳಿ ಮೊರಾರ್ಜಿ ವಸತಿ ಶಾಲೆ, ಕೋಟಗುಡ್ಡ ಸಹನಾ ಇಂಗ್ಲಿಷ್ ಶಾಲೆಗಳು ಶೇ 100ರಷ್ಟು ಫಲಿತಾಂಶ ದಾಖಲಿಸಿವೆ.

ಪಾವಗಡ ತಾಲ್ಲೂಕಿನ ಕಿಲಾರ್ಲಹಳ್ಳಿಯ ರಾಷ್ಟ್ರ ಪ್ರಗತಿ ಶಾಲೆ ಮತ್ತು ಕೊರಟಗೆರೆ ಪಟ್ಟಣದ ಮೂಡಲಪಣ್ಯ ವಿವೇಕಾನಂದ ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾದ ವಾಸವಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿನಿ ಡಿ.ಎಂ.ಹರ್ಷಿತಾ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ ವಿದ್ಯಾರ್ಥಿನಿ ಬಿ.ಐಶ್ವರ್ಯಾ (619) ದ್ವಿತೀಯ, ಭುವನಹಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿ ಆರ್.ನಿಧಿ (618) ತೃತೀಯ ಸ್ಥಾನ ಪಡೆದಿದ್ದಾರೆ.

ಮಧುಗಿರಿ ತಾಲ್ಲೂಕಿನ ಡಿ.ವಿ.ಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ವರುಣ್ (616) ಮತ್ತು ಮಧುಗಿರಿ ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಟಿ.ಚರಿತಾ (616) ಅಂಕ ಪಡೆಯುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಚಿರೆಕ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಎಂ.ಪವಿತ್ರ (615) ದ್ವಿತೀಯ ಮತ್ತು ಚೇತನ ಆಂಗ್ಲ ಪ್ರೌಢಶಾಲೆಯ ವಿ.ಎಸ್.ತೇಜಸ್ (613) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT