ಗುಬ್ಬಿ: ಎರಡು ಗುಂಪಿನ ನಡುವೆ ಕ್ಷುಲ್ಲಕ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ ತಾಲ್ಲೂಕಿನ ಸಿ.ಎಸ್. ಪುರ ಹೋಬಳಿಯ ಇಡಗೂರು ಗ್ರಾಮದಲ್ಲಿ ನಡೆದಿದೆ.

ಆನಂದ ಎಂಬುವರು ಗಾಯ ಗೊಂಡಿದ್ದು, ಆದಿಚುಂಚನ ಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ. ಜಾತ್ರೆ ವೇಳೆ ದೇವರನ್ನು ಬೋರಪ್ಪನಹಳ್ಳಿಗೆ ಕೊಂಡೊಯ್ಯುವ ವಿಚಾರದಲ್ಲಿ ಗುಡಿಗೌಡ ರಾಮಕೃಷ್ಣಯ್ಯ ಹಾಗೂ ಆನಂದ ಅವರ ಗುಂಪಿನ ನಡುವೆ ಗಲಾಟೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಆನಂದ ಅವರಿಗೆ ಚಾಕುವಿನಿಂದ ಇರಿಯಲಾಗಿದೆ.

‘ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ತಂಡ ರಚಿಸಲಾಗಿದೆ’ ಎಂದು ಸಿ.ಎಸ್. ಪುರ ಠಾಣೆಯ ಪಿಎಸ್ಐ ನಾಗರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.