ತುಮಕೂರು: ತೀವ್ರ ಬರದಿಂದಾಗಿ ಮುಂಗಾರು ಹಂಗಾಮಿನಲ್ಲಿ ಬೆಳೆ ಒಣಗಿ ನಷ್ಟವಾಗಿದ್ದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಶೇ 25ರಷ್ಟು ಪರಿಹಾರ ನೀಡಲು ಜಿಲ್ಲಾ ಆಡಳಿತ ಮುಂದಾಗಿದೆ.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಬೆಳೆ ನಷ್ಟಕ್ಕೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಬೇಕು ಎಂದು ರೈತರು ಸತತವಾಗಿ ಒತ್ತಾಯಿಸುತ್ತಲೇ ಬಂದಿದ್ದಾರೆ. ಮುಂಗಾರು ಬೆಳೆ ಹಾಳಾಗಿ ಹಲವು ತಿಂಗಳುಗಳೇ ಕಳೆದಿದ್ದರೂ ಈವರೆಗೂ ಪರಿಹಾರ ನೀಡಿಲ್ಲ. ಈಗಲೂ ಪೂರ್ಣ ಪ್ರಮಾಣದಲ್ಲಿ ರೈತರಿಗೆ ಪರಿಹಾರ ನೀಡುತ್ತಿಲ್ಲ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನೋಂದಾಯಿಸಿಕೊಂಡಿದ್ದ ರೈತರಿಗಷ್ಟೇ ಪರಿಹಾರ ಸಿಗಲಿದೆ.

ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಶೇ 50ಕ್ಕೂ ಹೆಚ್ಚು ಪ್ರಮಾಣದಲ್ಲಿ ಬೆಳೆ ಇಳುವರಿ ಕುಂಠಿತಗೊಂಡಿದೆ. ಪ್ರತಿಕೂಲ ಹವಾಮಾನವನ್ನು ಆಧರಿಸಿ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ 25ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬೆಳೆ ಕಟಾವಿನ ನಂತರ ಬೆಳೆಯ ಇಳುವರಿ ಮಾಹಿತಿ ಪಡೆದುಕೊಂಡು ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುತ್ತದೆ. ಈಗ ನೀಡುವ ಪರಿಹಾರದ ಮೊತ್ತವನ್ನು ಕಡಿತಮಾಡಿ ಉಳಿಕೆ ಹಣವನ್ನು ರೈತರಿಗೆ ಪಾವತಿಸಲಾಗುತ್ತದೆ. ಜಿಲ್ಲೆಯಲ್ಲಿ ಪರಿಹಾರ ಕೋರಿ 38,982 ಅರ್ಜಿಗಳು ಸಲ್ಲಿಕೆಯಾಗಿದ್ದು, ಒಟ್ಟು ₹12.95 ಕೋಟಿ ಪರಿಹಾರ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಯಾವ ತಾಲ್ಲೂಕಿಗೆ ಎಷ್ಟು?: ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ರಾಗಿ, ತೊಗರಿ ಬೆಳೆಗೆ ವಿಮೆ ಪರಿಹಾರ ಕೋರಿ 6,364 ರೈತರು ಅರ್ಜಿ ಸಲ್ಲಿಸಿದ್ದು, ₹2.40 ಕೋಟಿ ಪರಿಹಾರವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಗುಬ್ಬಿ ತಾಲ್ಲೂಕಿನಲ್ಲಿ ರಾಗಿ, ತೊಗರಿ ಬೆಳೆದ 2,674 ಮಂದಿ ರೈತರಿಗೆ ₹85.65 ಲಕ್ಷ, ಕುಣಿಗಲ್ ತಾಲ್ಲೂಕಿನಲ್ಲಿ ರಾಗಿ ಬೆಳೆಗೆ 1,162 ರೈತರು ನೋಂದಾಯಿಸಿದ್ದು, ₹20.9 ಲಕ್ಷ, ತಿಪಟೂರು ತಾಲ್ಲೂಕಿನಲ್ಲಿ ರಾಗಿ, ತೊಗರಿ ಬೆಳೆ ಪರಿಹಾರಕ್ಕೆ 6,596 ಮಂದಿ ಅರ್ಜಿ ಸಲ್ಲಿಸಿದ್ದು, ₹1.60 ಕೋಟಿ, ತುಮಕೂರು ತಾಲ್ಲೂಕಿನಲ್ಲಿ ರಾಗಿ, ತೊಗರಿ ಬೆಳೆಗೆ ವಿಮೆ ಪರಿಹಾರ ಕೋರಿ 1,191 ರೈತರು ಅರ್ಜಿ ಸಲ್ಲಿಸಿದ್ದು, ₹32.78 ಲಕ್ಷ, ತುರುವೇಕೆರೆ ತಾಲ್ಲೂಕಿನಲ್ಲಿ ರಾಗಿ ಬೆಳೆಗೆ 2,519 ರೈತರು ಅರ್ಜಿ ಸಲ್ಲಿಸಿದ್ದು, ₹54.14 ಲಕ್ಷ ಪರಿಹಾರ ನೀಡಲಾಗುತ್ತದೆ.

ಕೊರಟಗೆರೆ ತಾಲ್ಲೂಕಿನಲ್ಲಿ ರಾಗಿ, ಮುಸುಕಿನ ಜೋಳ ಬೆಳೆಗೆ ಪರಿಹಾರ ಕೋರಿ 6,983 ರೈತರು ಅರ್ಜಿ ಸಲ್ಲಿಸಿದ್ದು, ₹2.62 ಕೋಟಿ, ಮಧುಗಿರಿ ತಾಲ್ಲೂಕಿನಲ್ಲಿ ರಾಗಿ, ತೊಗರಿ, ಮುಸುಕಿನ ಜೋಳ ಬೆಳೆಗೆ 6,240 ಮಂದಿ ಪರಿಹಾರ ಕೋರಿದ್ದು, ₹2.25 ಕೋಟಿ, ಪಾವಗಡ ತಾಲ್ಲೂಕಿನಲ್ಲಿ ರಾಗಿ, ತೊಗರಿ, ಮುಸುಕಿನ ಜೋಳ ಬೆಳೆದ 698 ರೈತರಿಗೆ ₹56.93 ಲಕ್ಷ, ಶಿರಾ ತಾಲ್ಲೂಕಿನಲ್ಲಿ ರಾಗಿ, ತೊಗರಿ, ಮುಸುಕಿನ ಜೋಳ ಬೆಳೆಗೆ ಪರಿಹಾರ ಕೋರಿ 4,555 ರೈತರು ಅರ್ಜಿ ಸಲ್ಲಿಸಿದ್ದು, ₹1.56 ಕೋಟಿ ಪರಿಹಾರ ವಿತರಣೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.