ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.28ಕ್ಕೆ ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆ

Published 6 ಜನವರಿ 2024, 5:24 IST
Last Updated 6 ಜನವರಿ 2024, 5:24 IST
ಅಕ್ಷರ ಗಾತ್ರ

ತುಮಕೂರು: ರಾಷ್ಟ್ರೀಯ ಮಾನವ–ಪರಿಸರ ಸಂರಕ್ಷಣಾ ಪಡೆಯಿಂದ ರಾಷ್ಟ್ರ ಜಾಗೃತಿ ಅಭಿಯಾನದ ಪ್ರಯುಕ್ತ ಜ. 28ರಂದು ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಜಾನಪದದ ಎಲ್ಲ ನೃತ್ಯ ಪ್ರಕಾರಗಳ ಕಲಾ ತಂಡಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ 5 ಜನರಿಗಿಂತ ಹೆಚ್ಚಿರಬೇಕು. ಆಸಕ್ತರು ಜ. 20ರ ಒಳಗೆ ನೋಂದಣಿ ಮಾಡಿಕೊಳ್ಳಬಹುದು. ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹50 ಸಾವಿರ, ದ್ವಿತೀಯ ಸ್ಥಾನ ಪಡೆದವರಿಗೆ ₹40 ಸಾವಿರ, ತೃತೀಯ ಸ್ಥಾನ ಪಡೆದವರಿಗೆ ₹30 ಸಾವಿರ ನೀಡಲಾಗುತ್ತದೆ.

ಮೊದಲು ನೋಂದಣಿಯಾದ 30 ತಂಡಗಳಿಗೆ ಆದ್ಯತೆ ನೀಡಲಾಗುತ್ತದೆ. ಮಾಹಿತಿಗೆ ಮೊ 9900772694, ಮೊ 9945236281 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT