ಸೋಮವಾರ, ಏಪ್ರಿಲ್ 6, 2020
19 °C

ನಾಳೆಯಿಂದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಚಕ್ರವರ್ತಿ ಗೆಳೆಯರ ಬಳಗದಿಂದ ರಾಜ್ಯಮಟ್ಟದ 7ನೇಹೊನಲು ಬೆಳಕಿನ ಟೆನ್ನಿಸ್ ಬಾಲ್‌ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.28 ರಿಂದ ಮಾರ್ಚ್‌ 1ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮುಖಂಡ ಪಿ.ಎನ್.ಕೃಷ್ಣಮೂರ್ತಿ ತಿಳಿಸಿದರು.

ಪಂದ್ಯಾವಳಿಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡುವರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಶ್ರೀನಿವಾಸ್, ಕೆ.ಎನ್.ರಾಜಣ್ಣ, ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಜಯಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎರಡನೇ ದಿನದ ಪಂದ್ಯಾವಳಿಗೆ ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ಹಾಗೂ ಮೂರನೇ ದಿನದ ಪಂದ್ಯಾವಳಿಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟಿಗ ಅಜರುದ್ದೀನ್, ದೊಡ್ಡಗಣೇಶ್, ಮೇಯರ್ ಫರೀದಾಬೇಗಂ, ಆಯುಕ್ತ ಭೂಬಾಲನ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ಮುಖಂಡ ಧನಿಯಾಕುಮಾರ್, ಕ್ರೀಡಾಪಟುಗಳು ಹಾಗೂ ಪೌರಕಾರ್ಮಿಕರು ಸೇರಿದಂತೆ 100 ಮಂದಿಯನ್ನು ಅಭಿನಂದಿಸಲಾಗುವುದು. ಮಾಹಿತಿಗೆ ಮೊಬೈಲ್ 98458 95324, 97421 23433 ಸಂಪರ್ಕಿಸಬಹುದು ಎಂದರು.

ಈಗಾಗಲೇ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳು ನೋಂದಣಿ ಮಾಡಿಕೊಂಡಿವೆ. ಪ್ರಥಮ ಬಹುಮಾನ ₹2.50 ಲಕ್ಷ, ದ್ವಿತೀಯ ₹1.50 ಲಕ್ಷ ಹಾಗೂ ಪ್ರತಿ ಪಂದ್ಯಕ್ಕೆ ಪಂದ್ಯಶ್ರೇಷ್ಟ ಹಾಗೂ ಸರಣಿಯ ಕೊನೆಯಲ್ಲಿ ವಿಶೇಷ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು