ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆಯ ಮಾತು, ಬರಹ: ಕಠಿಣ ಕ್ರಮ

Last Updated 22 ಫೆಬ್ರುವರಿ 2020, 10:26 IST
ಅಕ್ಷರ ಗಾತ್ರ

ತುಮಕೂರು: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ವಾಟ್ಸ್‌ಆ್ಯಪ್‌ಗಳಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಪರ ಮತ್ತು ವಿರೋಧದ ವಿಚಾರಗಳನ್ನು ಪ್ರಕಟಿಸಿದರೆ ಇಲ್ಲವೆ ವಿಡಿಯೊಗಳನ್ನು ಹರಿಬಿಟ್ಟರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಎಚ್ಚರಿಸಿದ್ದಾರೆ.

ಸಮಾಜದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಬರಹಗಳನ್ನು ಪ್ರಕಟಿಸುವವರ ಮೇಲೆ ನಿಗಾ ವಹಿಸಲಾಗುವುದು. ಅಂತಹವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಾದಾತ್ಮಕ ಬರಹಗಳು, ಪ್ರತಿಕ್ರಿಯೆಗಳು ಮತ್ತು ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಕಾನೂನು ರೀತಿಯ ಅಪರಾಧ. ಒಂದು ವೇಳೆ ಇಂತಹ ವಿಡಿಯೊಗಳು ಬಂದರೆ ಅದನ್ನು ವೈರಲ್ ಮಾಡದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಮೂಲಕ ಸಮಾಜದ ಕೋಮು ಸೌಹಾರ್ದ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT