ಭಾನುವಾರ, ಮೇ 9, 2021
26 °C
ಮದಲೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

‘ರೈತನಿಗೆ ಶಕ್ತಿ ತುಂಬಲು ಶ್ರಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಸಾಲಬಾಧೆಯಿಂದ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿದ್ದು, ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರೈತನಿಗೆ ಶಕ್ತಿ ತುಂಬಿದಾಗ ಮಾತ್ರ ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಮದಲೂರಿನಲ್ಲಿ ಶುಕ್ರವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ ಹಾಗೂ ಕೆಸಿಸಿ ಸಾಲ ವಿತರಣಾ ಸಮಾರಂಭದಲ್ಲಿ ನಾಮಫಲ ಅನಾವರಣಗೊಳಿಸಿ ಮಾತನಾಡಿದರು.

ರೈತ ಬೆಳೆದ ಪದಾರ್ಥಗಳಿಗೆ ಬೆಲೆ‌ ಇಲ್ಲ ಆದರೆ ರೈತ ಖರೀದಿ ಮಾಡುವ ಪದಾರ್ಥಗಳ ಬೆಲೆ‌ ಗಗನಕ್ಕೇರಿದೆ. 50 ಕೆ.ಜಿ. ರಸಗೊಬ್ಬರದ ಬೆಲೆ ₹700ಕ್ಕೆ ಹೆಚ್ಚಳವಾಗಿದೆ ಪರಿಸ್ಥಿತಿ ಈ ರೀತಿ ಇದ್ದರೆ ರೈತರು ಸಾಲ ತೀರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಹಕಾರ ಸಂಘಗಳಲ್ಲಿ ಮಾತ್ರ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ರೈತರ ಹಿತಕಾಯುತ್ತಿವೆ ಜೊತೆಗೆ ಸಾಲಮನ್ನಾದಂತಹ ಯೋಜನೆಗಳು ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ‌ಮಾತ್ರ ದೊರೆಯುವುದು. ಇವುಗಳ ಬೆಳವಣಿಗೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಕೊಡುಗೆ ಅಪಾರ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ರಾಜೇಂದ್ರ ಮಾತನಾಡಿ, ಬಡ ಜನತೆಯ ಹಿತಕಾಯಲು ಡಿಸಿಸಿ ಬ್ಯಾಂಕ್ ಹಲವಾರು ಯೋಜನೆಗಳನ್ನು ರೂಪಿಸಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಲಾಗುವುದು ಎಂದರು.

ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ಸಹಕಾರ ಸಂಘಗಳು ರೈತರ ಬಾಳಿನ ಆಶಾಕಿರಣವಾಗಿದೆ. ಇಲ್ಲಿ ಕೇವಲ ಪಹಣಿ ನೀಡಿದರೆ ಸಾಕು ರೈತರಿಗೆ ಸಾಲ ನೀಡಲಾಗುವುದು. ಪ್ರಸ್ತುತ ಸಹಕಾರಿ ಕ್ಷೇತ್ರ ಕೃಷಿಕರಿಗೆ ಮಾತ್ರ ಸೀಮಿತವಾಗದೆ ಸ್ವಸಹಾಯ ಸಂಘಗಳಿಗೂ ಸಾಲ ನೀಡುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ 750 ಮಂದಿ ರೈತರಿಗೆ ₹4.60 ಕೋಟಿ ಸಾಲ ವಿತರಿಸಲಾಯಿತು.

ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಜಿ.ಜೆ.ರಾಜಣ್ಣ, ನಿರ್ದೇಶಕರಾದ ಜಿ.ಎಸ್.ರವಿ, ಜಿ.ಎನ್.ಮೂರ್ತಿ, ಮುರುಗಪ್ಪಗೌಡ ಮಾತನಾಡಿದರು.

ಮುಖಂಡರಾದ ಎಸ್.ರಾಮ ಚಂದ್ರಯ್ಯ, ಎಂ.ಆರ್.ಶಶಿಧರ್ ಗೌಡ, ಡಿ.ಸಿ.‌ಆಶೋಕ್, ಬರಗೂರು ನಟರಾಜು, ಹುಣಸೇಹಳ್ಳಿ ಶಿವಕುಮಾರ್, ಗುಳಿಗೇನಹಳ್ಳಿ ನಾಗರಾಜು, ಚಂಗಾವರ ಮಾರಣ್ಣ, ವಿಎಸ್ಎಸ್ಎನ್ ಅಧ್ಯಕ್ಷ ನಾಗೇಂದ್ರಪ್ಪ, ಉಮೇಶ್ ಗೌಡ, ಸುಧಾಕರ್ ಗೌಡ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.