ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಟೌನ್ಹಾಲ್ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸರಿಯಾದ ಸಮಯಕ್ಕೆ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸದೆ ಶಾಲೆ, ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಶಕ್ತಿ ಯೋಜನೆ ಜಾರಿಯಾದ ನಂತರ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಥಳಾವಕಾಶವೇ ಸಿಗುತ್ತಿಲ್ಲ. ಇದರಿಂದ ತೀವ್ರ ಸಮಸ್ಯೆಯಾಗುತ್ತಿದ್ದು, ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿ ವೇತನ (ವಿದ್ಯಾ ಸಹಾಯ ಧನ) ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಪ್ರವೀಣ್, ರಾಜ್ಯ ಸಹಕಾರ್ಯದರ್ಶಿ ಎಚ್.ಆರ್.ಗುರುಪ್ರಸಾದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುನಿಲ್, ಪ್ರಮುಖರಾದ ಸಿದ್ದರಾಮಯ್ಯ, ಹರ್ಷಿತಾ, ವರಲಕ್ಷ್ಮಿ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.