ತುಮಕೂರು: ಕೋರ ಹೋಬಳಿ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನದಂದು ಧ್ವಜಕಂಬ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಂದನ್ (16) ಮೃತಪಟ್ಟ ವಿದ್ಯಾರ್ಥಿ. ಚಿಕ್ಕತೊಟ್ಲುಕೆರೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ರೇಣುಕ ವಿದ್ಯಾಪೀಠದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್, ಟ್ರಾಕ್ಟರ್ ಷೋರೂಂನಲ್ಲಿ ಕೆಲಸ ಮಾಡುತ್ತಿರುವ ಶಶಾಂಕ್ ಗಾಯಗೊಂಡಿದ್ದಾರೆ.

ಪವನ್ ಹಾಗೂ ಶಶಾಂಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೂವರು ಕರೀಕೆರೆ ಗ್ರಾಮದ ವಾಸಿಗಳಾಗಿದ್ದು ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರಧ್ವಜ ಅಳವಡಿಸಲು ಧ್ವಜಕಂಬವನ್ನು ಕೆಳಗಿಳಿಸುವ ಸಮಯದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್ಗೆ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.