ಅಪಘಾತದಲ್ಲಿ ವಿದ್ಯಾರ್ಥಿ ಸಾವು

ತುರುವೇಕೆರೆ: ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾಗೀಡಾಗಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ಯುವಕ ಮುದಿಗೆರೆ ಪಾಳ್ಯದ ಕುಮಾರ್ ಅವರ ಮಗ ನಂದೀಶ (19) ಎಂದು ಗುರುತಿಸಲಾಗಿದೆ.
ಮೃತ ಯುವಕ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.