ಪ್ರಜಾವಾಣಿ ವಾರ್ತೆ

ಶಿರಾ: ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ಮುಂಜಾನೆ ಮಹಮದ್ ರಫಿ (19) ಎಂಬ ವಿದ್ಯಾರ್ಥಿ ಶೌಚಾಲಯದಲ್ಲಿ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಮಹಮದ್ ರಫಿ ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಸಿವಿಲ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹಮದ್ ರಫಿ ವಾರದ ಹಿಂದೆ ಸ್ವಗ್ರಾಮಕ್ಕೆ ತೆರಳಿ ಚಿಕಿತ್ಸೆ ಪಡೆದು ಮಂಗಳವಾರ ವಿದ್ಯಾರ್ಥಿ ನಿಲಯಕ್ಕೆ ಮರಳಿದ್ದ. ರಾತ್ರಿ ಊಟ ಮಾಡಿ ಮಲಗಿದ್ದ. ಬುಧವಾರ ಮುಂಜಾನೆ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಎಷ್ಟು ಸಮಯವಾದರೂ ಶೌಚಾಲಯದಿಂದ ಹೊರಕ್ಕೆ ಬಾರದ ಕಾರಣ ಇತರ ವಿದ್ಯಾರ್ಥಿಗಳು ಕೂಗಿದರು ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಬಾಗಿಲನ್ನು ಹತ್ತಿ ನೋಡಿದಾಗ ಮಹಮದ್ ರಫಿ ಬಿದ್ದಿರುವುದನ್ನು ನೋಡಿ ವಾರ್ಡನ್ಗೆ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡುವ ವೇಳೆಗೆ ಮಹಮದ್ ರಫಿ ಮೃತಪಟ್ಟಿದ್ದ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.