ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

Published 27 ಜನವರಿ 2024, 14:15 IST
Last Updated 27 ಜನವರಿ 2024, 14:15 IST
ಅಕ್ಷರ ಗಾತ್ರ

ತಿಪಟೂರು: ನಗರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲಿ ನಿಂತು ಹೊಡೆದಾಡಿಕೊಂಡಿದ್ದಾರೆ.

ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ವೀಕ್ಷಣೆಗೆ ಬಂದಿದ್ದ ವಿದ್ಯಾರ್ಥಿಗಳು ಕಾರ್ಯಕ್ರಮ ಮುಗಿದ ನಂತರ ಯುವತಿಯನ್ನು ಮಾತನಾಡಿಸಿದ ಸಂಬಂದ ರಸ್ತೆ ಬದಿ ಹೊಡೆದಾಡಿಕೊಂಡಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು ನೆಹರೂ ನಗರ, ಇಂದಿರಾ ನಗರ, ಗೊರಗೊಂಡನಹಳ್ಳಿ ಗ್ರಾಮಗಳವರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ರಾತ್ರಿಯೇ ವಿದ್ಯಾರ್ಥಿಗಳು, ಪೋಷಕರನ್ನು ನಗರದ ಪೊಲೀಸ್ ಠಾಣೆಗೆ ಕರೆಸಿ ಕ್ಷಮಾಪಣೆ ಪತ್ರ ಬರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT