ಸೋಮವಾರ, ನವೆಂಬರ್ 29, 2021
20 °C

ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ಗ್ರಾಮದ ಬಳಿ ಬುಧವಾರ ವಿದ್ಯಾರ್ಥಿಗಳು, ಗ್ರಾಮಸ್ಥರು ಎರಡು ಬಸ್‍ಗಳನ್ನು ತಡೆದು ಬುಧವಾರ ಪ್ರತಿಭಟಿಸಿದರು.

ತಿಪಟೂರು– ಕೆರೆಗೋಡಿ- ದಸರೀಘಟ್ಟ ಮಾರ್ಗವಾಗಿ ಅನೇಕ ಕೆಎಸ್‌ಆರ್‌ಟಿಸಿ ಬಸ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದವು. ಆದರೆ ಇತ್ತೀಚಿಗೆ ಬಸ್‍ ಸಂಖ್ಯೆ ಕಡಿಮೆಯಾಗಿತ್ತು. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಬರುವ ಒಂದೆರೆಡು ಬಸ್‌ಗೆ ನೂರಾರು ವಿದ್ಯಾರ್ಥಿಗಳು ಹತ್ತುತ್ತಾರೆ. ಕೆರೆಗೋಡಿ ಗ್ರಾಮದಲ್ಲಿ ನಿಲುಗಡೆ ನೀಡದೆ ತೆರಳುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ ಎಂದು ಪ್ರತಿಭಟನೆ ನಿರತರು ದೂರಿದರು.

ಕೆರೆಗೋಡಿ ಗ್ರಾಮಸ್ಥ ಸ್ವಾಮಿ ಮಾತನಾಡಿ, ಹಲವು ಬಾರಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ, ಗ್ರಾಮೀಣ ಭಾಗದ ಸಾರಿಗೆ ವ್ಯವಸ್ಥೆಯನ್ನು ನಿರ್ಲಕ್ಷ್ಯದಿಂದ ನೋಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬಸ್ ಇಲ್ಲದೇ ಸರಿಯಾದ ಸಮಯಕ್ಕೆ ಶಾಲೆ, ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೆರೆಗೋಡಿ, ಅನಗೊಂಡನಹಳ್ಳಿ ಗ್ರಾಮಗಳ ಬಳಿ ಬಸ್ ನಿಲುಗಡೆ ನೀಡುವುದಿಲ್ಲ. ಇದರಿಂದ ತೊಂದರೆಯಾಗುತ್ತಿದೆ ಎಂದರು.‌

ಹಲವು ದಿನಗಳಿಂದ ಸಮಸ್ಯೆ ಇದ್ದು, ಬಸ್‌ ನಿಲ್ದಾಣದಲ್ಲಿ ಮಾಹಿತಿ ನಿಡಿದ್ದರೂ ಪ್ರಯೋಜನವಾಗಿಲ್ಲ. ಶಾಲೆ-ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿನಿಯೊಬ್ಬರು
ಒತ್ತಾಯಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.