ಪಾವಗಡ: ತಾಲ್ಲೂಕಿನ ಅರಸೀಕೆರೆ ಮಾರ್ಗದಿಂದ ಪಟ್ಟಣದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೆಎಸ್ಆರ್ಟಿಸಿ ಘಟಕ ನಿರೀಕ್ಷಕ ಶಿವಲಿಂಗಪ್ಪ ಅವರಿಗೆ ಸೋಮವಾರ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಶಾಲಾ, ಕಾಲೇಜಿಗೆ ಹೋಗುವ ಸಮಯಕ್ಕೆ ಅರಸೀಕೆರೆ ಮಾರ್ಗದಲ್ಲಿ ಬಸ್ ಸೌಕರ್ಯ ಇಲ್ಲದೆ ಸಮಸ್ಯೆಯಾಗುತ್ತಿದೆ. ಈಗಾಗಲೆ ಶಾಲಾ ಕಾಲೇಜು ಆರಂಭವಾಗಿವೆ. ಶಿರಾ ಡಿಪೋದಿಂದ ಬೆಳಗ್ಗೆ 8ಕ್ಕೆ ಅರಸೀಕೆರೆಗೆ ಸರ್ಕಾರಿ ಬಸ್ ಬರುತ್ತಿತ್ತು. ಆದರೆ ಆ ಬಸ್ಸನ್ನು ಸಹ ನಿಲ್ಲಿಸಲಾಗಿದೆ. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಇಲಾಖೆ ಹಾಜರಾತಿ ಕಡ್ಡಾಯಗೊಳಿಸಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಕೂಡಲೆ ಬಸ್ ಸೌಕರ್ಯ ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವೆಂಕಟೇಶ್, ಅನಿಲ್ ಮಹಾದೇವ್, ಸಾಗರ್, ಸೋಮಶೇಖರ್, ರಾಜೇಶ್, ವಿರುಪಾಕ್ಷ, ಧನುಶ್, ಚಿರಂಜೀವಿ, ಅಭಿಲಾಷ್, ದರ್ಶನ್, ಆರ್.ಸಾಗರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.