ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ಲದ ಬಸ್: ವಿದ್ಯಾರ್ಥಿಗಳ ರಸ್ತೆ ತಡೆ

Last Updated 17 ಆಗಸ್ಟ್ 2022, 6:26 IST
ಅಕ್ಷರ ಗಾತ್ರ

ತುಮಕೂರು: ಶಿರಾ ತಾಲ್ಲೂಕಿನ ದೊಡ್ಡ ಆಲದಮರದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು‌ ನಿಲ್ಲಿಸದೆ ಹೋಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬುಧವಾರ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಬಸ್‌ಗಳು ಸಂಚರಿಸುತ್ತಿದ್ದರೂ ತೊಂದರೆ ಅನುಭವಿಸಲಾಗುತ್ತಿದೆ. ಪ್ರತಿನಿತ್ಯ ಇಲ್ಲಿಂದ ತುಮಕೂರಿಗೆ ನೂರಾರು ವಿದ್ಯಾರ್ಥಿಗಳು ಹೋಗುತ್ತಿದ್ದಾರೆ. ಶಿರಾದಿಂದ ಬರುವ ಬಸ್‌ಗಳು ಅಲ್ಲಿಯೇ ಭರ್ತಿಯಾಗಿ ಬರುವುದರಿಂದ ಇಲ್ಲಿ ಬಸ್‌ಗಳನ್ನು ನಿಲ್ಲಿಸದೆ ಹೋಗುತ್ತಿದ್ದಾರೆ. ಗಂಟೆಗಟ್ಟಲೆ ಕಾದು ಕುಳಿತರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಸಮಯಕ್ಕೆ ಸರಿಯಾಗಿ ತರಗತಿಗೆ ಹೋಗಲು ಸಾಧ್ಯವಾಗದೆ ಶೈಕ್ಷಣಿಕವಾಗಿ ಹಿನ್ನಡೆ ಅನುಭವಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಶಾಸಕರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿ ರಸ್ತೆ ತಡೆ ತೆರವುಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT