ಮಂಗಳವಾರ, ಡಿಸೆಂಬರ್ 7, 2021
24 °C

ಕೋವಿಡ್ ಪರೀಕ್ಷೆಗೆ ಗಂಟೆಗಟ್ಟಲೆ ಕಾದ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ಕೋವಿಡ್ ಪರೀಕ್ಷೆ ಮಾಡಿಸಲು ನೂರಾರು ವಿದ್ಯಾರ್ಥಿಗಳು ಗುರುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಬಳಿ ಗಂಟೆಗಟ್ಟಲೆ ಸರದಿಯಲ್ಲಿ ಕಾಯಬೇಕಾಯಿತು.

ದಸರಾ ರಜೆ ಮುಕ್ತಾಯವಾದ ನಂತರ ವಸತಿ ಶಾಲೆಗಳಿಗೆ ಮರಳಲು ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಪೋಷಕರಿಗೆ ಪ್ರಾಂಶುಪಾಲರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ತಾಲ್ಲೂಕಿನ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಗಾಗಿ ಒಮ್ಮೆಲೆ ಆಸ್ಪತ್ರೆ ಬಳಿ ಬಂದಿದ್ದರಿಂದ ನೂಕುನುಗ್ಗಲು ಉಂಟಾಯಿತು.

ಕೆಲ ವಸತಿ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸದಿದ್ದರೂ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಿಗೆ ಸೇರಿಸಿಕೊಳ್ಳಲಾಗಿದೆ. ಆದರೆ ಮೊರಾರ್ಜಿ ಶಾಲೆಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ತಾಲ್ಲೂಕಿನ ವಿದ್ಯಾರ್ಥಿಗಳು 40ರಿಂದ 50 ಕಿ.ಮೀ ದೂರ ಕ್ರಮಿಸಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಶಾಲೆಗಳಿಗೆ ಮರಳಬೇಕಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಸರದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರು ಸಮಸ್ಯೆ ಹೇಳಿಕೊಂಡರು.

ತಹಶೀಲ್ದಾರ್ ಕೆ.ಆರ್.ನಾಗರಾಜು ಸ್ಥಳಕ್ಕೆ ತೆರಳಿ ಪರೀಕ್ಷೆ ಮಾಡಲು ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ವೈದ್ಯಾಧಿಕಾರಿ ತಿರುಪತಯ್ಯ ಅವರಿಗೆ ಸೂಚಿಸಿ ಸಮಸ್ಯೆ ಬಗೆಹರಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ, ವಸತಿ ಶಾಲೆಗಳ ಬಳಿಯೇ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಿಸಿದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಪಟ್ಟಣದ ಸರ್ಕಾರಿ ಆಸ್ಪತ್ರೆ ಬಳಿ ನೂರಾರು ಮಂದಿ ಮಕ್ಕಳು ಬರುವುದೂ ತಪ್ಪುತ್ತದೆ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು