ತುಮಕೂರು: ಇತ್ತೀಚೆಗೆ ಹದಿಹರೆಯದವರಲ್ಲಿ ಮಾನಸಿಕ ಒತ್ತಡ, ಖಿನ್ನತೆ, ಆತ್ಮಹತ್ಯೆ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ನಗರದ ವಿದ್ಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಮನೋವಿಜ್ಞಾನ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನಸಿಕ ಆರೋಗ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ನೀಡಬೇಕು. ಉತ್ತಮ ಆರೋಗ್ಯವು ಒತ್ತಡ ನಿಭಾಯಿಸಿ, ಸಕಾರಾತ್ಮಕ ಆಯ್ಕೆಗೆ ಸಹಾಯ ಮಾಡುತ್ತದೆ ಎಂದರು.

ಮನೋವೈದ್ಯ ಲೋಕೇಶ್ ಬಾಬು, ‘ಅತಿಯಾದ ಒತ್ತಡ, ಒಂಟಿತನವು ಆತಂಕ, ಖಿನ್ನತೆಗೆ ಕಾರಣವಾಗಬಹುದು. ಮಾನಸಿಕ ಅಸ್ವಸ್ಥತೆ ಸಮಯದಲ್ಲಿ ವೃತ್ತಿಪರರಿಂದ ಸಹಾಯ ಪಡೆಯಬೇಕು’ ಎಂದು ಸಲಹೆ ಮಾಡಿದರು.

ಮನೋವಿಜ್ಞಾನ ಸಂಘದ ಅಧ್ಯಕ್ಷ ಪ್ರೊ.ಗಂಗಾಧರ್, ಕಾರ್ಯದರ್ಶಿ ಎಸ್.ಪಿ.ಟವಿಕುಮಾರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜಿ.ಎಲ್.ಸೌಮ್ಯಾ, ವಿದ್ಯಾ ಕಾಲೇಜು ವ್ಯವಸ್ಥಾಪಕ ನಿರ್ದೇಶಕ ಅರ್ಜುನ್, ಪ್ರಾಂಶುಪಾಲರಾದ ಶಿಲ್ಪಾ, ನಿರ್ದೇಶಕ ರಾಜೇಶ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.