ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌: ಆತ್ಮಹತ್ಯೆಗೆ ವಿದ್ಯಾರ್ಥಿನಿಯರ ಯತ್ನ

Published 11 ಮೇ 2024, 6:17 IST
Last Updated 11 ಮೇ 2024, 6:17 IST
ಅಕ್ಷರ ಗಾತ್ರ

ಕೊರಟಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಇಬ್ಬರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿದ್ಯಾರ್ಥಿನಿಯರು ತಾಲ್ಲೂಕಿನ 2 ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಯತ್ನಿಸಿದ ಇಬ್ಬರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪರೀಕ್ಷೆಯಲ್ಲಿ ಫೇಲ್‌ ಆದ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದಾಗಿ ವಿದ್ಯಾರ್ಥಿನಿಯರು ಪೋಷಕರ ಮುಂದೆ ಒಪ್ಪಿಕೊಂಡಿದ್ದಾರೆ. ‘ಮುಂದಿನ ದಿನಗಳಲ್ಲಿ ಉತ್ತಮವಾಗಿ ಓದಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತೇವೆ’ ಎಂದು ಆಸ್ಪತ್ರೆಯಲ್ಲಿ ಪೋಷಕರ ಬಳಿ ಕೇಳಿಕೊಂಡರು. ‘ನಮ್ಮ ಮಕ್ಕಳು ಚೆನ್ನಾಗಿ ಓದಿದರೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಶಾಲೆಗೆ ಸೇರಿಸುತ್ತೇವೆ. ಮುಂದೆ ನಿಮಗೆ ಯಾವುದೇ ಒತ್ತಡ ಹಾಕುವುದಿಲ್ಲ’ ಎಂದು ಪೋಷಕರು ಕಣ್ಣೀರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT