ಪಾವಗಡ: ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಗುತ್ತಿಗೆದಾರ ಸುಜಿತ್ ಅವರಿಗೆ ಗುರುವಾರ ಕಾಮಗಾರಿ ನಿರ್ವಹಿಸಿದ ಹಣದ ಚೆಕ್ ನೀಡಿದ್ದಾರೆ.

ರಸ್ತೆ ಕಾಮಗಾರಿ ಮುಗಿಸಿದ್ದರೂ ಉದ್ದೇಶ ಪೂರ್ವಕವಾಗಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರ ಸುಜಿತ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿರುವ ವಿಡಿಯೊ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಈ ಬಗ್ಗೆ ಗುರುವಾರ ‘ಪ್ರಜಾವಾಣಿ’ಯಲ್ಲಿ ‘ಬಿಲ್ ಬಾಕಿ: ಗುತ್ತಿಗೆದಾರನಿಂದ ಆತ್ಮಹತ್ಯೆ ಬೆದರಿಕೆ’ ಶೀರ್ಷಿಕೆ ಅಡಿ ವರದಿ ಪ್ರಕಟವಾಗಿತ್ತು. ಎಚ್ಚೆತ್ತುಕೊಂಡ ಅಧಿಕಾರಿಗಳು ಬಾಕಿ ಮೊತ್ತದ ಚೆಕ್ ಹಸ್ತಾಂತರಿಸಿದ್ದಾರೆ.

‘ಸಾಲ ಮಾಡಿ ಕಾಮಗಾರಿ ಮುಗಿಸಿದ್ದೇನೆ. ಸ್ಥಳೀಯ ರಾಜಕೀಯ ಕಾರಣಗಳಿಗಾಗಿ ದುರುದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಹೀಗೆ ಮಾಡುತ್ತಿದ್ದಾರೆ‘ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.