ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ ನಿಧನ

Last Updated 25 ಡಿಸೆಂಬರ್ 2018, 18:28 IST
ಅಕ್ಷರ ಗಾತ್ರ

ತುಮಕೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ (98) ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮೃತಪಟ್ಟರು.

ಅವರಿಗೆ 12 ಮಕ್ಕಳು. ಇವರಲ್ಲಿ ನಾಲ್ಕು ಮಂದಿ ಗಂಡು ಹಾಗೂ ಒಬ್ಬ ಹೆಣ್ಣು ಮಗಳು ಈಗಾಗಲೇ ಮೃತಪಟ್ಟಿದ್ದಾರೆ. ಎರಡು ವರ್ಷಗಳಿಂದ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. 20 ದಿನಗಳ ಹಿಂದೆ ಚಿಕಿತ್ಸೆಗೆ ದಾಖಲಾಗಿದ್ದರು.

1920ರಲ್ಲಿ ಕದುರಮ್ಮ ಮತ್ತು ಬಾವಮ್ಮ ದಂಪತಿಯ ಎರಡನೇ ಮಗಳಾಗಿ ಪಾವಗಡ ತಾಲ್ಲೂಕು ತಿಮ್ಮನಾಯಕನಪೇಟೆಯಲ್ಲಿ ನರಸಮ್ಮ ಜನಿಸಿದರು. 12ನೇ ವಯಸ್ಸಿನಲ್ಲಿಯೇ ಆಂಜನಪ್ಪ ಅವರನ್ನು ವಿವಾಹವಾಗಿ ಕೃಷ್ಣಾಪುರಕ್ಕೆ ಬಂದರು.

ಸುಮಾರು 70 ವರ್ಷ ಸೂಲಗಿತ್ತಿ ಕಾಯಕ ಮಾಡಿದ ಅವರು 10 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಪದ್ಮಶ್ರೀ, ವಯೋಶ್ರೇಷ್ಠ ಸನ್ಮಾನ, ದೇವರಾಜ ಅರಸು, ರಾಜ್ಯೋತ್ಸವ, ಕಿತ್ತೂರು ರಾಣಿ ಚನ್ನಮ್ಮ, ಮುರುಘಾಶ್ರೀ, ವೈದ್ಯ ರತ್ನ ಅವರು ಪಡೆದ ಪ್ರಮುಖ ಪ್ರಶಸ್ತಿಗಳು. ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ.

ಬುಧವಾರ ಮಧ್ಯಾಹ್ನ ತುಮಕೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT