ಶಿಕ್ಷಣದಿಂದ ಮೂಢನಂಬಿಕೆ ದೂರ

ಗುಬ್ಬಿ: ಮಾನವೀಯ ಧರ್ಮಕ್ಕೆ ಚ್ಯುತಿ ಬರುವ ಆಚರಣೆಗಳು ಇಂದಿಗೂ ಜೀವಂತವಿದೆ. ಇವುಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಗ್ರಾಪಂ ಸದಸ್ಯ ಶಿವಲಿಂಗಯ್ಯ ಹೇಳಿದರು.
ತಾಲ್ಲೂಕಿನ ಬಿದರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಾಗರಿಕ ಸಮಾಜದಿಂದ ದೂರ ಉಳಿಯುವ ಮೂಢನಂಬಿಕೆಗಳಿಂದ ಹೊರತಾದ ಶೈಕ್ಷಣಿಕ ಪ್ರಗತಿಗೆ ಅಲೆಮಾರಿ ಜನಾಂಗ ಪಣತೊಡಬೇಕು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಪವಿತ್ರ, ಅಂಗನವಾಡಿ ಮೇಲ್ವಿಚಾರಕಿ ಶಿವಮ್ಮ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.