ಶನಿವಾರ, ಅಕ್ಟೋಬರ್ 31, 2020
27 °C
ಜಿಲ್ಲೆಯಲ್ಲಿ ಧಾನ್ಯ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು, ಹೋಟೆಲ್ ಮಾಲೀಕರ ಬೆಂಬಲ

ತುಮಕೂರು: ನಾಳಿನ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್‌ಗೆ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಜಿಲ್ಲೆಯಲ್ಲಿ ಧಾನ್ಯ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು, ಹೋಟೆಲ್ ಮಾಲೀಕರು, ವಿದ್ಯಾರ್ಥಿ-ಯುವಜನ-ಮಹಿಳಾ ಸಂಘಟನೆಗಳು ಬೆಂಬಲ ನೀಡಿವೆ. ಎಸ್‍ಎಫ್‍ಐ, ಡಿವೈಎಫ್‍ಐ, ಎಐಡಿಎಸ್‍ಒ, ಎಐಎಂಎಸ್‍ಎಸ್, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ), ಕನ್ನಡ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಸಿಐಟಿಯು, ಎಐಟಿಯುಸಿ, ಎಐಟಿಯುಟಿಯುಸಿ, ಕಾರ್ಮಿಕ ಸಂಘಟನೆಗಳು, ಸಿಪಿಎಂ, ಜೆಡಿಯು ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿವೆ. 

ಬಂದ್‌ಗೆ ಸಂಬಂಧಿಸಿದಂತೆ ನಗರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ರಾಜ್ಯ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುವ ಲಕ್ಷಣಗಳು ಇವೆ ಎಂದರು.

ಬೆಳಿಗ್ಗೆ 7.30ಕ್ಕೆ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಲ್ಲಿ ಸಮಾವೇಶಗೊಳ್ಳುವರು. ಅಲ್ಲಿಂದ ಬೈಕ್ ರ‍್ಯಾಲಿ, ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕಾರ್ಯದರ್ಶಿ ಬಿ.ಉಮೇಶ್ ತಿಳಿಸಿದರು.

ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಪಟೇಲ್, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಿ.ಯತಿರಾಜು, ಅರುಣ್‍ಕುಮಾರ್, ಗಿರೀಶ್, ಎಸ್.ಎನ್.ಸ್ವಾಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು