ಗುರುವಾರ , ಡಿಸೆಂಬರ್ 3, 2020
23 °C

ಶಿರಾ: ಸರ್ಕಾರದ ಜನಪರ ಯೋಜನೆಗಳ ಬೆಂಬಲಿಸಿ: ಶೋಭಾ ಕರಂದ್ಲಾಜೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಗೆಲ್ಲಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.

ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ದ್ವಾರನಕುಂಟೆ ಗ್ರಾಮದಲ್ಲಿ ಮಂಗಳವಾರ ರಾಜೇಶ್ ಗೌಡ ಪರ ಮತಯಾಚಿಸಿದರು.

‘ಬಿಜೆಪಿ‌ ದಲಿತರು, ರೈತರು, ಬಡವರು ಹಾಗೂ ಶೋಷಿತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಬೈಸಿಕಲ್, ಉಜ್ವಲ ಗ್ಯಾಸ್, ಬಾಣಂತಿಯರಿಗೆ ₹ 5 ಸಾವಿರ, ಕೊರೊನಾ ‌ಸಮಯದಲ್ಲಿ ಉಚಿತ ಅಕ್ಕಿ, ಗೋದಿ ವಿತರಣೆ ಸೇರಿದಂತೆ ಆರ್ಹ ಫಲಾನಿಭವಿಗಳಿಗೆ ಪ್ರಾಮಾಣಿಕವಾಗಿ ಸೌಲಭ್ಯ ಕಲ್ಪಿಸಿದೆ’ ಎಂದರು.

ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಎಪಿಎಂಸಿ ನಿರ್ದೇಶಕಿ ಲಲಿತಮ್ಮ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪದ್ಮಾ, ಜಯಮ್ಮ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು