ತುಮಕೂರು: ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಕೆಎನ್ಆರ್ ಅಭಿಮಾನಿ ಬಳಗದ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ರಾಜಣ್ಣ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ರಾಜಣ್ಣ ಅವರು ಹಿಂದುಳಿದ, ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಭಾವಿ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡ ಸಮಯದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ಅನುಭವಿಸಿತ್ತು. ಈಗ ರಾಜಣ್ಣ ಅವರನ್ನು ವಜಾಗೊಳಿಸಿರುವುದು ವಿಷಾದನೀಯ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಜನಪರ ಯೋಜನೆ ಜಾರಿಗೊಳಿಸಿ, ಜನರ ವಿಶ್ವಾಸ ಗಳಿಸಿದ್ದ ದೇವರಾಜ ಅರಸು ಅವರನ್ನು ಕಾಂಗ್ರೆಸ್ ಕಡೆಗಣಿಸಿತ್ತು. ಈಗ ರಾಜಣ್ಣ ಅವರಿಗೆ ಅಪಮಾನ ಮಾಡಲಾಗಿದೆ. ಇದು ಅಭಿಮಾನಿಗಳ ನೋವಿಗೆ ಕಾರಣವಾಗಿದೆ ಎಂದು ಬೇಸರ ಹೊರ ಹಾಕಿದರು.

ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಜೆ.ರಾಜಣ್ಣ, ಜಿ.ಎನ್.ಮೂರ್ತಿ, ನಾಗೇಶ್ಬಾಬು, ಲಕ್ಷ್ಮಿನಾರಾಯಣ, ಮುಖಂಡರಾದ ನಾರಾಯಣಗೌಡ, ಟಿ.ಪಿ.ಮಂಜುನಾಥ್, ಚಂದ್ರಗಿರಿ ಲಕ್ಷ್ಮಿನಾರಾಯಣ, ಮಲ್ಲಸಂದ್ರ ಶಿವಣ್ಣ, ಧನಿಯಾಕುಮಾರ್, ರಾಜೇಶ್ ದೊಡ್ಮನೆ, ಮುರಳಿಕೃಷ್ಣಪ್ಪ, ಎಂ.ಎಚ್.ನಾಗರಾಜು, ಕೆ.ವಿ.ಕೃಷ್ಣಮೂರ್ತಿ, ಕುಂಕುಮನಹಳ್ಳಿ ಕುಮಾರ್, ಎಂ.ಎನ್.ಕೆ.ರಾಜು, ಟಿ.ಆರ್.ಸುರೇಶ್, ಬಸವರಾಜು, ಶಿವಾನಂದ್, ಡ್ಯಾಗೇರಹಳ್ಳಿ ವಿರೂಪಾಕ್ಷ, ಗುರುರಾಘವೇಂದ್ರ, ಜಿಯಾ, ಶ್ರೀನಿವಾಸ್, ಗುರುಮೂರ್ತಿ, ನವರತ್ನಕುಮಾರ್, ಶಿವಕುಮಾರ್, ರಮೇಶ್, ಗಂಗಾಧರ್, ಶಿವಣ್ಣ, ಜಿ.ಆರ್.ನಾಗರಾಜು ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.