ಮಂಗಳವಾರ, ಮೇ 24, 2022
26 °C

ಕುಣಿಗಲ್: ಒಕ್ಕಲಿಗರ ಸಂಘಕ್ಕೆ ಕಾಯಕಲ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ರಾಜ್ಯ ಒಕ್ಕಲಿಗರ ಸಂಘ ಅವ್ಯವಸ್ಥೆಯಿಂದ ಕೂಡಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಕಾಯಕಲ್ಪ ನೀಡಬೇಕಿದೆ ಎಂದು ಮಾಜಿ ಸಚಿವ ಡಿ. ನಾಗರಾಜಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತುಮಕೂರು ಜಿಲ್ಲೆಯಿಂದ ಇಬ್ಬರು ನಿರ್ದೇಶಕರು ಆಯ್ಕೆಯಾಗಬೇಕಿದೆ. ಡಿ. 12ರಂದು ನಡೆಯುವ ಚುನಾವಣೆಗೆ ಇದೇ 15ರಿಂದ 23ರ ವರೆಗೆ ನಾಮಪತ್ರ ಸಲ್ಲಿಸಬೇಕಿದೆ ಎಂದರು.

ಪ್ರಸಕ್ತ ಸಾಲಿನ ಚುನಾವಣೆಗೆ ತಮ್ಮ ಪುತ್ರ ಬಿ.ಎನ್. ಲೋಕೇಶ್ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಮತ ನೀಡಬೇಕು. ಜಿಲ್ಲೆಯಲ್ಲಿ 33 ಸಾವಿರ ಮತದಾರರಿದ್ದಾರೆ. ಈ ಪೈಕಿ ಕುಣಿಗಲ್ ತಾಲ್ಲೂಕಿನಲ್ಲಿ 11 ಸಾವಿರ ಮತದಾರರಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಬಿ.ಎನ್. ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.