ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಜಿಯ ಶಸ್ತ್ರಚಿಕಿತ್ಸೆ, ಶಿಶ್ನಕ್ಕೆ ಹಾನಿ: ದೂರು

Last Updated 10 ಜೂನ್ 2020, 9:05 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗದ 4 ವರ್ಷದ ಮಗುವಿಗೆ ಮುಂಜಿಯ ನೆಪದಲ್ಲಿ ನಡೆದ ಶಸ್ತ್ರಚಿಕಿತ್ಸೆಯಿಂದಾಗಿ ಶಿಶ್ನಕ್ಕೆ ಹಾನಿಯಾಗಿದ್ದು, ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಪೋಷಕರು ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಫೈರೋಜ್ ಪಾಷ ತಮ್ಮ ಇಬ್ಬರು ಗಂಡು ಮಕ್ಕಳ ಮುಂಜಿಗಾಗಿ ಪಟ್ಟಣದ ಶಾಮೀರ್ ಆಸ್ಪತ್ರೆಗೆ ಮೇ 11ರಂದು ದಾಖಲಿಸಿದ್ದರು. ವೈದ್ಯರಾದ ತನ್ವೀರ್ ಮತ್ತು ಶಬಾರ ಅವರು ಶಸ್ತ್ರಚಿಕಿತ್ಸೆ ಮಾಡಿದ್ದರು. ಕೆಲ ದಿನಗಳ ನಂತರ ಹಿರಿಯ ಮಗನ ಶಿಶ್ನಕ್ಕೆ ಗಾಯವಾಗಿದ್ದು, ಮಂಡ್ಯದ ಮಾತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರ ಶಿಫಾರಸಿನಂತೆ ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಈ ಬಗ್ಗೆ ಡಾ.ತನ್ವೀರ್‌ ಅವರನ್ನು ವಿಚಾರಿಸಿದಾಗ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ಅವಮಾನಿಸಿ ಕಳುಹಿಸಿದ್ದಾರೆ. ವೈದ್ಯರ ನಿರ್ಲಕ್ಷದಿಂದಾಗಿ ಅಂಗ ಊನವಾಗಿದೆ. ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಫೈರೋಜ್ ಪಾಷ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT