ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಮದ್ಯ ಸೇವಿಸಿ ಮಕ್ಕಳಿಗೆ ಪಾಠ, ಇಬ್ಬರು ಶಿಕ್ಷಕಿಯರ ಅಮಾನತು

Last Updated 8 ಸೆಪ್ಟೆಂಬರ್ 2022, 12:41 IST
ಅಕ್ಷರ ಗಾತ್ರ

ತುಮಕೂರು: ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರನ್ನು ಅಮಾನತು ಮಾಡಲಾಗಿದೆ. ಜತೆಗೆ ಇದೇ ಶಾಲೆಯ ನಾಗರತ್ನಮ್ಮ ಅವರನ್ನೂ ಅಮಾನತು ಗೊಳಿಸಲಾಗಿದೆ.

ದೂರು ಬಂದ ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ ಶಾಲೆಗೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಗ್ರಾಮಸ್ಥರು, ಜನರು ಈ ಸಮಯದಲ್ಲಿ ಶಿಕ್ಷಕಿಯರ ವಿರುದ್ಧ ದೂರಿನ ಸುರಿಮಳೆಗೈದಿದ್ದು, ಶಿಕ್ಷಕಿ ಗಂಗಲಕ್ಷ್ಮಮ್ಮ ಅವರ ಟೇಬಲ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ಇದನ್ನು ಪೊಲೀಸರಿಗೆ ನೀಡಿದ್ದು, ಪರಿಶೀಲಿಸಿ ಕ್ರಮ ಜರುಗಿಸಬೇಕು, ಅಗತ್ಯ ವರದಿ ನೀಡುವಂತೆ ಕೋರಲಾಗಿದೆ ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದರು.

ಶಾಲೆಯ ಇಬ್ಬರು ಶಿಕ್ಷಕಿಯರ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ಮಾಡಿಕೊಳ್ಳುತ್ತಿದ್ದರು. ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿರಲಿಲ್ಲ. ಈ ಎಲ್ಲಾ ಬೆಳವಣಿಗೆ ಗಮನಿಸಿದ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಬಿಇಒಗೆ ಬುಧವಾರ ದೂರು ಸಲ್ಲಿಸಿದ್ದರು. ಶಾಲೆಗೆ ಭೇಟಿನೀಡಿದ ಬಿಇಒ ಅಲ್ಲಿನ ವಸ್ತುಸ್ಥಿತಿ ಮಾಹಿತಿ ಪಡೆದುಕೊಂಡಿದ್ದಾರೆ. ಶಿಕ್ಷಕಿ ಶಾಲೆಯಲ್ಲೇ ಮದ್ಯ ಸೇವಿಸುತ್ತಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ವಿಚಾರಣೆ ಕಾಯ್ದಿಸಿ ಇಬ್ಬರು ಶಿಕ್ಷಕಿಯರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT