ತುಮಕೂರು: ವೈಜ್ಞಾನಿಕ ಸಮೀಕ್ಷೆಯ ಮುಖಾಂತರ ಮೂಲಭೂತ ಸೌಕರ್ಯಗಳ ಕೊರತೆ ಇರುವ ಶಾಲೆಗಳ ಮಾಹಿತಿ ಕಲೆ ಹಾಕಲಾಗಿದೆ. ವಿವಿಧ ಇಲಾಖೆಗಳು ಒಟ್ಟುಗೂಡಿ ಕೆಲಸ ಮಾಡಿದರೆ ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹೇಳಿದರು.

ನಗರದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಉತ್ತರದಾಯಿತ್ವ’ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಘ–ಸಂಸ್ಥೆಗಳ ಸಿಎಸ್ಆರ್ ನಿಧಿಯಿಂದ ಉತ್ತಮ ವ್ಯವಸ್ಥೆ ರೂಪಿಸಬೇಕು. ಶೌಚಾಲಯ, ಕೊಠಡಿ, ಕಾಂಪೌಂಡ್, ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ ಇತರೆ ಸೌಲಭ್ಯ ಒದಗಿಸುವ ಸಂಕಲ್ಪ ಮಾಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ನೋಡಿಕೊಳ್ಳಬೇಕು. ಪಠ್ಯದ ಜತೆ ಅನುಭವಾತ್ಮಕ ಕಲಿಕೆಗೆ ಒತ್ತು ನೀಡಬೇಕು. ಅವರ ಭವಿಷ್ಯಕ್ಕೆ ಬೇಕಾದ ಅಂಶಗಳನ್ನು ಕಲಿಸುವ ಅವಶ್ಯಕತೆ ಇದೆ ಎಂದರು.

ವ್ಯವಸ್ಥಿತವಾದ ಶಿಕ್ಷಣ ನೀಡಿದಾಗ ಮಾತ್ರ ದೇಶ ಅಭಿವೃದ್ಧಿಯಾಗಿ ಜನರು ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಅನುಭವಾತ್ಮಕ ಕಲಿಕೆ ಕರಪತ್ರ, ಕ್ಷಮತೆ ಕರಪತ್ರ ಬಿಡುಗಡೆ ಮಾಡಲಾಯಿತು. ಡಿಡಿಪಿಐ ಎಚ್.ಕೆ.ಮನಮೋಹನ್, ಮಧುಗಿರಿ ಡಿಡಿಪಿಐ ಬಿ.ಎಚ್.ಗಿರಿಜಾ, ಮಧುಗಿರಿ ಡಯಟ್ ಪ್ರಾಂಶುಪಾಲ ಎಚ್.ಆರ್.ಗಂಗಾಧರ್, ಉಪನ್ಯಾಸಕ ನಂಜುಂಡಯ್ಯ, ಕೇರಿಂಗ್ ವಿಥ್ ಕಲರ್ ಮುಖ್ಯಸ್ಥ ರಾಜೀವ್ ಅನ್ನಲೂರು, ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕ ಎಂ.ಆರ್.ಮಾರುತಿ, ಡಯಟ್ ಪ್ರಾಂಶುಪಾಲ ಕೆ.ಮಂಜುನಾಥ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.