ಗುರುವಾರ , ಡಿಸೆಂಬರ್ 3, 2020
20 °C

ಸ್ವಚ್ಛ ಸರ್ವೇಕ್ಷಣೆ; ತುಮಕೂರಿಗೆ 2ನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೇಂದ್ರ ಸರ್ಕಾರದ ‘ಸ್ವಚ್ಛ ಸರ್ವೇಕ್ಷಣ್ 2020’ ಅಭಿಯಾನದಲ್ಲಿ ತುಮಕೂರು ಮಹಾನಗರ ಪಾಲಿಕೆಯು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ. ರಾಷ್ಟ್ರಮಟ್ಟದಲ್ಲಿ ಮಹಾನಗರ ಪಾಲಿಕೆಗಳ ಹಂತದಲ್ಲಿ 48ನೇ ಸ್ಥಾನಕ್ಕೆ ಭಾಜನವಾಗಿದೆ.

ಒಟ್ಟಾರೆ ಎಲ್ಲ ಸ್ಥಳೀಯ ಸಂಸ್ಥೆಗಳ ಪಟ್ಟಿಯಲ್ಲಿ 72ನೇ ಸ್ಥಾನ ಪಡೆದಿದೆ. ಕಳೆದ ಸಾಲಿಗಿಂತ ಅತ್ಯುತ್ತಮ ರ‍್ಯಾಂಕ್ ಪಡೆದಿದೆ. 2019ರ ಸಮೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 4ನೇ ಸ್ಥಾನ, ರಾಷ್ಟ್ರಮಟ್ಟದಲ್ಲಿ 231ನೇ ಸ್ಥಾನ ಪಡೆದಿತ್ತು.

ಒಟ್ಟು 6 ಸಾವಿರ ಅಂಕಗಳಿಗೆ ತುಮಕೂರು ಮಹಾನಗರ ಪಾಲಿಕೆಯು 3863.66 ಅಂಕ ಪಡೆದಿದೆ. ಮೊದಲ ಸ್ಥಾನದಲ್ಲಿ ಮೈಸೂರು ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು