ಶುಕ್ರವಾರ, ಆಗಸ್ಟ್ 7, 2020
25 °C

ಸ್ವಾಮೀಜಿ ಚಾತುರ್ಮಾಸ್ಯ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಆಂಧ್ರಪ್ರದೇಶದ ಆದೋನಿಯ ಶಾರದಾ ದತ್ತಪೀಠಂನ ವಿದ್ಯಾಭಿನವ ಸುಬ್ರಹ್ಮಣ್ಯ ಭಾರತೀ ಸ್ವಾಮೀಜಿ ಅವರ 47ನೇ ಚಾತುರ್ಮಾಸ್ಯವು ನಗರದ ಬಿ.ಎಚ್.ರಸ್ತೆಯ ಶೃಂಗೇರಿ ಶಂಕರ ಮಠದಲ್ಲಿ ಆರಂಭಗೊಂಡಿದೆ.

ಸೆ. 2ರ ವರೆಗೆ ಚಾತುರ್ಮಾಸ್ಯ ವ್ರತವನ್ನು ಸ್ವಾಮೀಜಿ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಧಾರ್ಮಿಕ ಪೂಜೆಗಳು, ರುದ್ರಾಭಿಷೇಕ, ಶ್ರೀಚಕ್ರಪೂಜೆ ನಡೆಯಲಿದೆ.

ಎಂಜಿನಿಯರಿಂಗ್ ಪದವಿ ಪಡೆದಿರುವ ಸ್ವಾಮೀಜಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದ್ದಾರೆ. 38ನೇ ವಯಸ್ಸಿನಲ್ಲಿ ಸಂನ್ಯಾಸ ದೀಕ್ಷೆ ಸ್ವೀಕರಿಸಿದ ಅವರು ತಮ್ಮ 47ನೇ ವರ್ಷದ ಚಾತುರ್ಮಾಸ್ಯವನ್ನು ನಗರದಲ್ಲಿ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.