‘ಕುಮಾರಸ್ವಾಮಿಗೆ ತಾರತಮ್ಯ ಭಾವನೆ ಇಲ್ಲ’

7

‘ಕುಮಾರಸ್ವಾಮಿಗೆ ತಾರತಮ್ಯ ಭಾವನೆ ಇಲ್ಲ’

Published:
Updated:
Deccan Herald

ತುಮಕೂರು: ಉತ್ತರ ಕರ್ನಾಟಕದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಾರತಮ್ಯ ಅನುಸರಿಸುತ್ತಿಲ್ಲ. ಆ ಭಾವನೆ ಅವರಿಗೆ ಇದ್ದಿದ್ದರೆ ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡುತ್ತಿರಲಿಲ್ಲ ಎಂದು ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಹೇಳಿದರು.

ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘವು ಭಾನುವಾರ ಇಲ್ಲಿ ಆಯೋಜಿಸಿದ್ಧ ಕೆಂಪೇಗೌಡರ ಜಯಂತಿಯಲ್ಲಿ ಮಾತನಾಡಿದರು.

ಎಚ್.ಡಿ.ದೇವೇಗೌಡ, ಎಸ್.ಎಂ.ಕೃಷ್ಣ, ಡಿ.ವಿ.ಸದಾನಂದಗೌಡ, ಕುಮಾರಸ್ವಾಮಿ ಹೀಗೆ ದಕ್ಷಿಣ ಕರ್ನಾಟಕದವರು ಮುಖ್ಯಮಂತ್ರಿ ಆಗಿದ್ದ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ವಿಶೇಷವಾಗಿ ದೇವೇಗೌಡರು ಆ ಭಾಗದ ನೀರಾವರಿ ಅಭಿವೃದ್ಧಿಗೆ ಮಾಡಿದಷ್ಟು ಪ್ರಯತ್ನವನ್ನು ಯಾರೂ ಮಾಡಿಲ್ಲ ಎಂದು ಹೇಳಿದರು.

ಹಾಗೆ ನೋಡಿದರೆ ನಮ್ಮ ಭಾಗದ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಅಭಿವೃದ್ಧಿ ಅಗಿಲ್ಲ ಎಂದರು.

‘ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ ₹ 10 ಸಾವಿರ ಕೋಟಿ ಪರಿಹಾರದ ಮೊತ್ತ ನೀಡಿದೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ₹ 44 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ’ ಎಂದು ಪ್ರಶಂಸಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !