ಬುಧವಾರ, ಡಿಸೆಂಬರ್ 2, 2020
17 °C

ಟಿ.ಬಿ.ಜಯಚಂದ್ರ ಅವರಿಗೆ ಕೋವಿಡ್‌–19 ದೃಢ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

TB jayachandra

ಶಿರಾ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಸೋಮವಾರ ಕೋವಿಡ್‌–19 ದೃಢಪಟ್ಟಿದ್ದು,  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಯಚಂದ್ರ ಅವರ ಪತ್ನಿ ನಿರ್ಮಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಟಿ.ಬಿ‌.ಜಯಚಂದ್ರ ಅವರು ಹೋಂ ಕ್ವಾರೈಂಟೆನ್‌ನಲ್ಲಿ ಇದ್ದರು. ಎರಡು ದಿನಗಳಿಂದ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪರೀಕ್ಷೆ ನಡೆಸಿದ್ದು, ರಾತ್ರಿ ಸೋಂಕು ದೃಢಪಟ್ಟಿದೆ.  

ಹಾಗಾಗಿ ತುಮಕೂರಿನಲ್ಲಿ ನಡೆಯುವ ಶಿರಾ ಉಪಚುನಾವಣೆಯ ಮತಗಳ ಎಣಿಕೆಯಲ್ಲಿ ಜಯಚಂದ್ರ ಗೈರಾಗುವ ಸಾಧ್ಯತೆ ಇದೆ. ಪ್ರಚಾರದ ಸಮಯದಲ್ಲಿ ಜನ ಗುಂಪಾಗಿ ಸೇರುತ್ತಿದ್ದರಿಂದ ಹಲವರಿಗೆ ಕೊರೊನಾ ಸೋಂಕು ತಗುಲಿದೆ.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಕಲ್ಕೆರೆ ರವಿಕುಮಾರ್ ಅವರಿಗೆ ಕೊರೊನಾ ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು