ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕ ಹಾಗೂ ಕರ್ತವ್ಯ ಲೋಪ ಎಸಗಿರುವ ಮುಖ್ಯ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಮಂಗಳವಾರ ಅಮಾನತು ಮಾಡಿದ್ದಾರೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲ್ಲೂಕಿನ ಬೋರನಗುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ.
ಈ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಾರದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.