ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅಮಾನತು

Published 28 ನವೆಂಬರ್ 2023, 14:00 IST
Last Updated 28 ನವೆಂಬರ್ 2023, 14:00 IST
ಅಕ್ಷರ ಗಾತ್ರ

ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಡಿಡಿಪಿಐ ಎಂ.ಆರ್.ಮಂಜುನಾಥ್ ಅಮಾನತುಗೊಳಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನ ರಂಟವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಲಕ್ಷ್ಮಿಕಾಂತ ಅವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದರು. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡ ಪೋಷಕರು ಸೋಮವಾರ ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಶಿಕ್ಷಕನ ಮೇಲೆ ಆಪಾದನೆಗಳ ಬಗ್ಗೆ ವಿಚಾರಣೆ ಹಾಗೂ ಸೂಕ್ತ ಶಿಸ್ತುಕ್ರಮ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT