ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್ | ಅನುಚಿತ ವರ್ತನೆ; ಶಿಕ್ಷಕ ಅಮಾನತು

Published 1 ಜುಲೈ 2023, 14:41 IST
Last Updated 1 ಜುಲೈ 2023, 14:41 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕ ಗೋಪಾಲ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕ ಗೋಪಾಲ್ ವೈಯುಕ್ತಿಕ ವಿಚಾರ ಮಾತನಾಡಿ, ಜಾತಿ ನಿಂದನೆ, ಮಾನಸಿಕ ಕಿರುಕುಳ ನೀಡಿ, ಅವಾಚ್ಯ ಮತ್ತು ಅವಹೇಳನಕಾರಿ ಪದ ಬಳಿಸಿ ನಿಂದಿಸಿದ್ದಾರೆ ಎಂದು ಶಿಕ್ಷಕಿ  ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಅಧಿಕಾರಿಗಳು ಸಂಧಾನ ಮಾಡಿದ್ದರು. ಆನಂತರವೂ ಗೋಪಾಲ್ ಅದನ್ನೇ ಮುಂದುವರೆಸಿದ್ದರಿಂದ ಶಿಕ್ಷಕಿ ಉಪನಿರ್ದೇಶಕರಿಗೆ ದೂರು ನೀಡಿದ್ದರು.

ಶಿಕ್ಷಣಾಧಿಕಾರಿ ರಂಗದಾಸಪ್ಪ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿ ನೀಡಿದ ವರದಿಯ ಮೇರೆಗೆ ಉಪನಿರ್ದೇಶಕ ಸಿ.ನಂಜಯ್ಯ, ಶಿಕ್ಷಕ ಗೋಪಾಲ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT