ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣ ಕ್ಷೇತ್ರವನ್ನು ಆವರಿಸಲಿದೆ ಕೃತಕ ಬುದ್ಧಿಮತ್ತೆ

ಕೌಶಲ ವೃದ್ಧಿಸಿಕೊಳ್ಳಲು ಶಾಸಕ ಡಾ.ರಂಗನಾಥ್ ಎಚ್ಚರಿಕೆ
Published 5 ಸೆಪ್ಟೆಂಬರ್ 2024, 14:23 IST
Last Updated 5 ಸೆಪ್ಟೆಂಬರ್ 2024, 14:23 IST
ಅಕ್ಷರ ಗಾತ್ರ

ಕುಣಿಗಲ್: ವಿಶ್ವದ ಶೈಕ್ಷಣಿಕ ರಂಗದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗುತ್ತಿರುವ ಸಮಯದಲ್ಲಿ ಶಿಕ್ಷಕರು ಅವರ ಕೌಶಲ ವೃದ್ಧಿಸಿಕೊಳ್ಳದಿದ್ದರೆ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಶೈಕ್ಷಣಿಕ ಕ್ಷೇತ್ರವನ್ನು ಆವರಿಸಿಕೊಂಡು ಅರ್ಹರಿಗೆ ಆಪತ್ತು ತರಲಿದೆ ಎಂದು ಶಾಸಕ ಡಾ.ರಂಗನಾಥ್ ಎಚ್ಚರಿಸಿದರು.

ಪಟ್ಟಣದಲ್ಲಿ ಗುರುವಾರ ನಡೆದ ಸರ್ವಪಲ್ಲಿ ರಾಢಕೃಷ್ಣನ್ ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ನಿವೃತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕರು ರಾಜಕೀಯ ಬಿಟ್ಟು ಗುಣಾತ್ಮಕ ಶಿಕ್ಷಣದ ಕಡೆ ಗಮನಹರಿಸಲು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದರಾಜು, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಮನವಿ ಮಾಡಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನಿಡಸಾಲೆ ಪ್ರಸಾದ್, ಶಿಕ್ಷಕರ ದಿನಾಚರಣೆ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರ ಪಾಲಿಗೆ ಕರಾಳ ದಿನವಾಗಿದೆ. ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ವೇತನವಿಲ್ಲದರ ಜತೆಗೆ ಯಾವುದೇ ಪಿಂಚಣಿ ಸೌಲಭ್ಯಗಳು ಇಲ್ಲದೆ ನೂರಾರು ಕುಟುಂಬಗಳು ಬೀದಿಗೆ ಬರುವಂತಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಹಶೀಲ್ದಾರ್ ರಶ್ಮಿ, ಪುರಸಭೆ ಮುಖ್ಯಾಧಿಕಾರಿ ಶಿವಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ, ಇಪ್ಪಾಡಿ ವಿಎಸ್‌ಎಸ್‌ಎನ್‌ ಅಧ್ಯಕ್ಷ ವಿಶ್ವನಾಥ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಶಿವಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲಕೃಷ್ಣ, ಕಸಾಪ ಅಧ್ಯಕ್ಷ ಕಪನಿಪಾಳ್ಯ ರಮೇಶ್, ಶಿಕ್ಷಕರ ವಿವಿಧ ಸಂಘಗಳ ಅಧ್ಯಕ್ಷರಾದ ರಮೇಶ್, ಎಚ್.ಬಿ.ಹರೀಶ್, ಗೋವಿಂದರಾಜು, ಶಿವರಾಮಯ್ಯ, ನರಸಿಂಹಮೂರ್ತಿ, ದೇವರಾಜು, ಗಂಗಾಧರ್ ಜಿ.ಡಿ. ಸೋಮಶೇಖರ್, ಗೀತಾಂಜಲಿ, ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಅಧ್ಯಕ್ಷ ವೇಣುಗೋಪಾಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT