ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರ ಸ್ನಾತ್ತಕೋತ್ತರ, ಕಾನೂನು ಪದವಿ ಕಾಲೇಜು

ಶಾಸಕ ಎಂ.ಟಿ.ಕೃಷ್ಣಪ್ಪ ಭರವಸೆ
Published : 5 ಸೆಪ್ಟೆಂಬರ್ 2024, 14:23 IST
Last Updated : 5 ಸೆಪ್ಟೆಂಬರ್ 2024, 14:23 IST
ಫಾಲೋ ಮಾಡಿ
Comments

ತುರುವೇಕೆರೆ: ಕ್ಷೇತ್ರದಲ್ಲಿನ ಬಡವರು, ಕೂಲಿಕಾರ್ಮಿಕರು ಮತ್ತು ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಹೊರ ಜಿಲ್ಲೆಗಳಿಗೆ ಹೋಗುವುದು ಕಷ್ಟಸಾಧ್ಯ. ಹಾಗಾಗಿ ತಾಲ್ಲೂಕಿಗೆ ಸ್ನಾತಕೋತ್ತರ ಮತ್ತು ಕಾನೂನು ಪದವಿ ಕಾಲೇಜನ್ನು ತರಲು ಚಿಂತಿಸಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗುಡ್ಡೇನಹಳ್ಳಿ ಪ್ರಥಮ ದರ್ಜೆ ಕಾಲೇಜು ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ವಿಭಾಗದ ಅರ್ಥಶಾಸ್ತ್ರ ಮತ್ತು ಎಂ.ಕಾಂ ಪದವಿಗಳನ್ನು ಹೊಸದಾಗಿ ತೆರೆಯಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಬಳಿ ಚರ್ಚಿಸಲಾಗಿದೆ ಎಂದು ಹೇಳಿದರು.

ಬಿಇಒ ಎನ್.ಸೋಮಶೇಖರ್ ಮಾತನಾಡಿ, ಸಾಧಿಸುವ ಛಲವಿದ್ದರೆ ಶಿಕ್ಷಕರೊಬ್ಬರು ರಾಷ್ಟ್ರಪತಿ ಹುದ್ದೆಗೂ ಏರಬಹುದು ಎಂದು ತೋರಿಸಿಕೊಟ್ಟವರು ರಾಧಾಕೃಷ್ಣನ್. ಅವರ ಚಿಂತನೆ, ಆದರ್ಶ ಮತ್ತು ತತ್ವಗಳನ್ನು ಪ್ರತಿಯೊಬ್ಬ ಶಿಕ್ಷಕರು ಅಳವಡಿಸಿಕೊಳ್ಳಬೇಕು ಎಂದರು.

ವಿರಕ್ತಮಠದ ಕರಿವೃಷಭದೇಶೀ ಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಮಾದಿಹಳ್ಳಿ ರಾಮಕೃಷ್ಣಮಠದ ಅಧ್ಯಕ್ಷ ಸ್ವಾಮಿ ಮಂಗಳನಾಥನಂದ ಮಹಾರಾಜ್, ಉದಯ ಭಾರತಿ ಪ್ರಥಮ ದರ್ಜೆ ಕಾಲೇಜಿನ ಎಸ್.ವಿ.ವಿಜಯಕುಮಾರ್, ತಹಶೀಲ್ದಾರ್ ಎನ್.ಎಕುಂಞಅಹಮದ್, ಇ.ಒ.ಶಿವರಾಜಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂರಾಜುಮುನಿಯೂರು, ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಇಸಿಒ ಸಿದ್ದಪ್ಪ, ಬಿಆರ್‌ಸಿ ಸುರೇಶ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ, ರೋಟರಿ ಅಧ್ಯಕ್ಷ ಸಾ.ಶಿ.ದೇವರಾಜು, ಇನ್ನರ್ ವ್ಹೀಲ್‌ ಅಧ್ಯಕ್ಷೆ ನೇತ್ರಾ, ಸಾವಿತ್ರಿಬಾಯಿ ಫುಲೆ ಸಂಘದ ಭವ್ಯಸಂಪತ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT