ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪರ್ಕದ ಕೊಂಡಿಯಾಗಿ ಕಾರ್ಯ ನಿರ್ವಹಿಸಿ; ಶಿಕ್ಷಕರಿಗೆ ಸಲಹೆ

ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ಸಲಹೆ
Last Updated 14 ಸೆಪ್ಟೆಂಬರ್ 2020, 7:51 IST
ಅಕ್ಷರ ಗಾತ್ರ

ತುರುವೇಕೆರೆ: ಪೋಷಕರು- ವಿದ್ಯಾರ್ಥಿಗಳ ಸಂಪರ್ಕದ ಕೊಂಡಿಯಾಗಿ ಶಿಕ್ಷಕರು ಕೆಲಸ ಮಾಡುತ್ತಾ ಮಕ್ಕಳು ಒಂದಿಲ್ಲೊಂದು ಕಲಿಕೆಯಲ್ಲಿ ಸಕ್ರಿಯವಾಗುವಂತೆ ನೋಡಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ಹೇಳಿದರು.

ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗ ಪಠ್ಯ ವಿಷಯ ಬೋಧಿಸುವುದಕ್ಕಿಂತ ಮೊದಲು ಮಕ್ಕಳಿಗೆ ಕನಿಷ್ಠ ಮೂಲ ಭಾಷಾ ಕಲಿಕೆ ಹಾಗೂ ಇನ್ನಿತರ ಕಲಿಕಾ ಸಾಮರ್ಥ್ಯಗಳನ್ನು ಕಲಿಸಲು ಆದಷ್ಟು ಒತ್ತು ನೀಡಿ ಎಂದು ಸಲಹೆ ನೀಡಿದರು.

ಜಿಲ್ಲಾ ವಿಷಯ ಪರಿವೀಕ್ಷಕ ಸಂಪನ್ಮೂಲ ವ್ಯಕ್ತಿ ಗಿರೀಶ್ ಮಾತನಾಡಿದರು. ಬಿಆರ್‌ಸಿ ವಸಂತ್‌ ಕುಮಾರ್, ಪ್ರಾಂಶುಪಾಲ ಪರಮೇಶ್ವರ್, ಕನ್ನಡ ಭಾಷಾ ಬೋಧಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಮಂಜೇಗೌಡ, ಸಂಪನ್ಮೂಲ ವ್ಯಕ್ತಿಗಳಾದ ಗುರುರಾಜು, ಶ್ರೀಕಾಂತ್, ಉಮಾಮಹೇಶ್, ಸಚೀಂದ್ರನ್, ಆದಿನಾರಾಯಣ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT