ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ‘ಶಿಕ್ಷಕ ವೃತ್ತಿಗೆ ಬೆಲೆ ಕಟ್ಟಲಾಗದು’

Last Updated 6 ಸೆಪ್ಟೆಂಬರ್ 2022, 5:07 IST
ಅಕ್ಷರ ಗಾತ್ರ

ಕುಣಿಗಲ್: ‘ಪವಿತ್ರವಾದ ಶಿಕ್ಷಕ ವೃತ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ವೃತ್ತಿ ಗೌರವಕ್ಕೆ ಚ್ಯುತಿ ಬರದಂತೆ ಕಾರ್ಯ ನಿರ್ವಹಿಸಬೇಕು’ ಎಂದು ಶಾಸಕ ಡಾ.ರಂಗನಾಥ್ ಕರೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಡಾ.‌ಸರ್ವಪಲ್ಲಿ ರಾಧಾಕೃಷ್ಣನ್ ಅವರ 135 ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶಕ್ಕೆ ಸೈನಿಕನಿದ್ದಂತೆ ಸುಶಿಕ್ಷಿತ ಸಮಾಜಕ್ಕೆ ಶಿಕ್ಷಕ ಅಗತ್ಯ. ಶಿಕ್ಷಕರು ಪ್ರಜಾಪ್ರಭುತ್ವದಲ್ಲಿ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಪಡುತ್ತಿದ್ದರೂ, ಪೋಷಕರ ಮತ್ತು ಸಮಾಜದ ಬೆಂಬಲ ಹೆಚ್ಚು ಬೇಕಾಗಿದೆ. ನಿವೃತ್ತಿ ನಂತರವೂ ಸದಕಾಲ ಗೌರವ ಸಿಗುತ್ತಿರುವುದು ಶಿಕ್ಷಕರಿಗೆ ಮಾತ್ರ ಎಂದರು.

ತುಮಕೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಅನುಸೂಯಾ ಪ್ರಧಾನ ಭಾಷಣ ಮಾಡಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ 122 ವಿದ್ಯಾರ್ಥಿಗಳಿಗೆ ₹ 1.20 ಲಕ್ಷ ನಗದು ಬಹುಮಾನ ವಿತರಿಸಲಾಯಿತು. ತಹಶೀಲ್ದಾರ್ ಮಹಬಲೇಶ್ವರ್, ಬಿಇಒ ಬೋರೆಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ವೇಣುಗೋಪಾಲ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT