ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕನಾಯಕನಹಳ್ಳಿ: ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದ ತಹಶೀಲ್ದಾರ್

Published 20 ಮಾರ್ಚ್ 2024, 16:52 IST
Last Updated 20 ಮಾರ್ಚ್ 2024, 16:52 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ₹30 ಸಾವಿರ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಗೀತಾ ಬುಧವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಅವರಿಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ಬೆಳಗ್ಗೆ ₹20 ಸಾವಿರ ಹಣ ಪಡೆದಿದ್ದರು. ರಾತ್ರಿ 8 ಗಂಟೆಯ ಸಮಯದಲ್ಲಿ ₹30 ಸಾವಿರ ಹಣ ತೆಗೆದುಕೊಳ್ಳುವಾಗ ತಮ್ಮ ಮನೆಯಲ್ಲಿಯೇ ಸಿಕ್ಕಿಬಿದ್ದಿದ್ದಾರೆ.

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ನೇತೃತ್ವದ ತಂಡ ಕಾರ್ಯಚರಣೆ ನಡೆಸಿತ್ತು. ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT