ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾರ್‌ಗೆ ರಕ್ಷಣೆ ಇಲ್ಲಸಾಮಾನ್ಯರ ಪಾಡೇನು

ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆತಂಕ
Last Updated 11 ಜುಲೈ 2020, 7:31 IST
ಅಕ್ಷರ ಗಾತ್ರ

ಗುಬ್ಬಿ: ತಹಶೀಲ್ದಾರ್ ಅವರನ್ನೇ ಪೊಲೀಸ್ ಸಮ್ಮುಖದಲ್ಲಿ ಹತ್ಯೆಮಾಡುವ ಸ್ಥಿತಿ ಇದೆ ಎಂದರೆ ಸಾಮಾನ್ಯರ ಪಾಡೇನು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿವಾದಿತ ಜಮೀನಿನ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ತಹಶೀಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. ಆರೋಪಿ ನಿವೃತ್ತ ಶಿಕ್ಷಕರಾಗಿದ್ದು, ಈ ಕೃತ್ಯ ಎಸಗಿದ್ದು ಅಮಾನವೀಯ. ಆರೋಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರನ್ನು ಕೆಲವು ಖಾಸಗಿ ವ್ಯಕ್ತಿಗಳು ಹೆದುರಿಸಿ, ಧಮಕಿ ಹಾಕಿ ಕೆಲಸ ಮಾಡಿಸಿಕೊಳ್ಳುತ್ತಿರುವ ಪ್ರವೃತ್ತಿ ಇತ್ತೀಚೆಗೆ ಬೆಳೆಯುತ್ತಿದೆ. ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ. ನೌಕರರ ಜೀವ ರಕ್ಷಣೆಗೆ ವಿಶೇಷ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಂದಾಯ ನೌಕರರ ಸಂಘದ ಅಧ್ಯಕ್ಷ ಎಸ್. ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾಧ್ಯಕ್ಷ ಘಟಕದ ಅಧ್ಯಕ್ಷ ನರಸಿಂಹರಾಜ, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ ನಾರಾಯಣ್, ಮಹೇಶ್, ನಾಗ
ಭೂಷಣ್, ನಾಗರಾಜು, ಆರ್.ಐ ರಮೇಶ್, ಕುಮಾರ ಸ್ವಾಮಿ, ವಾಸುದೇವರಾಜು, ಕರುಣಾಕರ್ ಶೆಟ್ಟಿ, ಪಿ.ಆರ್. ಚಂದ್ರಶೇಖರ್, ಸಂಜೀವಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT