ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಪ್ಪನಹಳ್ಳಿ ಗ್ರಾಮ: ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದವರು ಚೇತರಿಕೆ

Last Updated 29 ಏಪ್ರಿಲ್ 2019, 12:41 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದವರು ಚೇತರಿಸಿಕೊಂಡಿದ್ದಾರೆ.

ಆಂಜನೇಯಸ್ವಾಮಿ ದೇವರ ಪ್ರಸಾದ ಸೇವಿಸಿ ಭಾನುವಾರ 115 ಮಂದಿ ಅಸ್ವಸ್ಥರಾಗಿದ್ದು, ಕಳ್ಳಂಬೆಳ್ಳ, ಶಿರಾ ಮತ್ತು ತುಮಕೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಶಿರಾ ಆಸ್ಪತ್ರೆಯಲ್ಲಿ 40 ಮಂದಿ ಹೊರರೋಗಿಗಳಾಗಿ, 75 ಮಂದಿ ಒಳರೋಗಿಗಳಾಗಿ ದಾಖಲಾಗಿದ್ದು, ಅದರಲ್ಲಿ 40 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಶಿರಾ ಆಸ್ಪತ್ರೆಯಲ್ಲಿ ಇದ್ದವರು ಚೇತರಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ. ಪ್ರಸ್ತುತ 3 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಸಕರ ಭೇಟಿ: ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಸತ್ಯನಾರಾಯಣ ಸೋಮವಾರ ಚಿನ್ನೇನಹಳ್ಳಿ ಗ್ರಾಮಕ್ಕೆ ಮತ್ತು ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಪ್ರಾಣಾಪಾಯವಾಗದಂತೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದ ವೈದ್ಯರ ಸೇವೆಯನ್ನು ಶಾಸಕರು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT